ಇಳಕಲ್ಲ
ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಶರಣ ಸಂಸ್ಕೃತಿ ಮಹೋತ್ಸವ ಹಾಗೂ ಜಾತ್ರಾ ಮಹೋತ್ಸವದ ನಿಮಿತ್ತ ಸೋಮವಾರ ಇಲ್ಲಿಯ ವಿಜಯ ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆ ಆವರಣದಲ್ಲಿ ಸಂಜೆ 7ಗಂಟೆಗೆ ವಚನ ಸಾಹಿತ್ಯದ ರಥೋತ್ಸವ ಜರುಗಿತು.
ರಥೋತ್ಸವಕ್ಕೂ ಮುನ್ನ ಶ್ರೀಮಠದಿಂದ ಪಲ್ಲಕ್ಕಿ ಆಗಮಿಸಿತು. ರಥೋತ್ಸವದಲ್ಲಿ ನಗರದ, ಸುತ್ತಮುತ್ತಲಿನ ಹಳ್ಳಿಗಳ ಹಾಗೂ ಶ್ರೀಮಠದ 62 ಶಾಖಾ ಮಠಗಳ ಸಾವಿರಾರು ಭಕ್ತರು ಕಿಕ್ಕಿರಿದು ಸೇರಿದ್ದರು.
ವಿಜಯ ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆಗೆ ಕಾಯಿ, ಹಣ್ಣು, ಹೂ ಅರ್ಪಿಸಿ, ನಮಿಸಿದರು.




ಗುರುಮಹಾಂತ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ಬೆಲ್ದಾಳದ ಸಿದ್ಧರಾಮ ಶರಣರು, ಲಿಂಗಸೂರಿನ ಸಿದ್ದಲಿಂಗ ಶ್ರೀಗಳು, ಶಿರೂರಿನ ಬಸವಲಿಂಗ ಶ್ರೀಗಳು, ಸಂತೆಕಡೂರಿನ ನವಲಿಂಗ ಶರಣರು, ಸಿದ್ದಯ್ಯನಕೋಟೆಯ ಬಸವಲಿಂಗ ಶರಣರು, ಪಾಂಡೋಮಟ್ಟಿಯ ಗುರುಬಸವ ಶ್ರೀಗಳು, ಬಸವ ಬೆಳವಿಯ ಗುರುಬಸವ ಶ್ರೀಗಳು, ಶಾಸಕ ವಿಜಯಾನಂದ ಕಾಶಪ್ಪನವರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಪಾಲ್ಗೊಂಡಿದ್ದರು.
ಆಗಸದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು ಸೇರಿದ ಜನರ ಮನಸೂರೆಗೊಂಡವು.
