ಇಂದಿನಿಂದ ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನ

ಬಸವನ ಬಾಗೇವಾಡಿ ರಾಜ್ಯದ್ಯಂತ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಇಂದು ಬಸವನ ಬಾಗೇವಾಡಿಯಲ್ಲಿ ಚಾಲನೆಯಾಗಲಿದೆ. ಬಸವಜನ್ಮಭೂಮಿಯಾದ ಬಸವನ ಬಾಗೇವಾಡಿಯಲ್ಲಿ ಉದ್ಘಾಟನೆಗೊಂಡು ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ ಅಕ್ಟೋಬರ್ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಗೊಳ್ಳಲಿದೆ. ಒಂದು ತಿಂಗಳ ನಡೆಯುವ ಈ ಅಭಿಯಾನವು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಪೂಜ್ಯ ನಾಡೋಜ ಡಾ. ಬಸವಲಿಂಗ ಪಟ್ಟದೇವರು, ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಪೂಜ್ಯ ಮಾತೆ ಗಂಗಾದೇವಿಯವರ ನೇತೃತ್ವದಲ್ಲಿ ನಡೆಯಲಿದ್ದು … Continue reading ಇಂದಿನಿಂದ ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನ