ಶರಣ ಜಯಂತಿಗಳ ಜಾತಿವಾರು ಹಂಚಿಕೆ ಸರಿಯಲ್ಲ: ಶಿವರಾಜ್‌ ತಂಗಡಗಿ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಆಯೋಜಿಸಿದ ಕಾಯಕ ಶರಣರ ಜಯಂತಿಯಲ್ಲಿ ಎಚ್. ಲಿಂಗಪ್ಪ ಅವರಿಗೆ ಕಾಯಕ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ಎಸ್.ತಂಗಡಗಿ ‘ಮಹನೀಯರು ಹಾಗೂ ಶರಣರ ಜಯಂತಿಗಳನ್ನು ಜಾತಿಗಳ ನಡುವೆ ಹಂಚಿಕೊಂಡಿರುವುದು ಸರಿಯಲ್ಲ’ ಎಂದು ಹೇಳಿದರು.

‘ಲಿಂಗಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದಾಗ ನಮ್ಮ ಸಮಾಜದವರಿಗೆ ಪ್ರಶಸ್ತಿ ನೀಡಬೇಕಿತ್ತು ಎಂದು ಮುಖಂಡೊಬ್ಬರು ಕರೆ ಮಾಡಿದ್ದರು. ಇಲ್ಲಿ ಯಾವುದೇ ಜಾತಿಗಿಂತ ತತ್ವ ಸಿದ್ಧಾಂತ ಮುಖ್ಯ. ಕಳೆದ ಬಾರಿ ಕನಕಶ್ರೀ ಪ್ರಶಸ್ತಿಯನ್ನು ಬ್ರಾಹ್ಮಣ ಸಮುದಾಯದ, ಸಮ-ಸಮಾಜದ ಬಗ್ಗೆ ಒಲವು ಹೊಂದಿದ್ದವರಿಗೆ ನೀಡಿದ್ದೆವು, ಎಂದು ತಿಳಿಸಿದರು.‌

ಬಸವ ಹರಳಯ್ಯ ಸ್ವಾಮೀಜಿ, ಅಬಕಾರಿ ಇಲಾಖೆ‌ ಸಚಿವ ಆರ್.ಬಿ.ತಿಮ್ಮಾಪುರ, ರಾಜ್ಯಸಭಾ ಮಾಜಿ ಸಂಸದ ಎಲ್.ಹನುಮಂತಯ್ಯ, ಅಖಿಲ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜದ ಅಧ್ಯಕ್ಷ ಸಂತೋಷ್ ಸುರೇಂದ್ರ ಸವಣೂರು, ಮಾದಿಗ ಸಮುದಾಯದ ಎಂ.ಗುರುಮೂರ್ತಿ, ಆದಿಜಾಂಬವ ಸಮಾಜದ ಸಿದ್ದರಾಜು, ಇಲಾಖಾ‌‌ ಕಾರ್ಯದರ್ಶಿ ಜೆ.ಮಂಜುನಾಥ್, ನಿರ್ದೇಶಕಿ ಕೆ.ಎಂ. ಗಾಯಿತ್ರಿ ಉಪಸ್ಥಿತರಿದ್ದರು.

ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿ
https://www.facebook.com/basavamedia1/

Share This Article
Leave a comment

Leave a Reply

Your email address will not be published. Required fields are marked *