ರಾಜ್ಯಮಟ್ಟದ ಕದಳಿ ಮಹಿಳಾ ಸಮಾವೇಶಕ್ಕೆ ಮೀನಾಕ್ಷಿ ಬಾಳಿ ಅಧ್ಯಕ್ಷೆ

ಕಲಬುರಗಿ:

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕದಳಿ ಮಹಿಳಾ ವೇದಿಕೆ ವತಿಯಿಂದ, ಸಾಹಿತಿ ಶರಣ ಚಿಂತಕಿ ಡಾ. ಮೀನಾಕ್ಷಿ ಬಾಳಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕದಳಿ ಮಹಿಳಾ ವೇದಿಕೆಯ ಜಿಲ್ಲಾಧ್ಯಕ್ಷೆ ಡಾ. ಶಾಂತಾ ಬಿ.ಅಸ್ಟಿಗೆ ತಿಳಿಸಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕದಳಿ ಮಹಿಳಾ ವೇದಿಕೆ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಕಲ್ಬುರ್ಗಿ ಘಟಕದ ವತಿಯಿಂದ ಅಕ್ಟೋಬರ್ 26 ಮತ್ತು 27 ರಂದು ಎರಡು ದಿನಗಳ ಕಾಲ 12ನೇ ರಾಜ್ಯಮಟ್ಟದ ಕದಳಿ ಮಹಿಳಾ ಸಮಾವೇಶ ನಗರದ ಜೈ ಭವಾನಿ ಕನ್ವೆನ್ಷನ್ ಸಭಾಮಂಟಪದಲ್ಲಿ ಜರುಗಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅ. 26 ಬೆಳಗ್ಗೆ 10 ಗಂಟೆಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹಾಗೂ ಗದಗನ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು, ಜಗದ್ಗುರು ಡಾ. ಸಾರಂಗದರ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯಸಾನಿಧ್ಯ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಪೂಜ್ಯ ಮಾತೊಶ್ರೀ ಡಾ. ದಾಕ್ಷಾಯಣಿ ಶರಣಬಸಪ್ಪ ಅಪ್ಪ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಕದಳಿ ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷ ಪ್ರಿಯಾಂಕ ಖರ್ಗೆ ಭಾಗವಹಿಸುವರು ಎಂದರು.

ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ “ಕಲ್ಯಾಣ ಕದಳಿ ” ಸಮಾವೇಶದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ “ಅಕ್ಕ ಕೇಳವ್ವ” ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಗ್ರಾಮೀಣ ಮತಕ್ಷೇತ್ರ ಶಾಸಕ ಬಸವರಾಜ ಮತ್ತಿಮಡು “ಮಹಾದಾಸೋಹಿ” ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. 63 ಪುರಾತನ ಚಿತ್ರ ಪುಟಗಳ ಗ್ರಂಥವನ್ನು ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್ ಬಿಡುಗಡೆಗೊಳಿಸಲಿದ್ದಾರೆ ಎಂದು ಅವರು ಹೇಳಿದರು.

ಸಮಾವೇಶದ ಸರ್ವಾಧ್ಯಕ್ಷೆ ಡಾ. ಮೀನಾಕ್ಷಿ ಬಾಳಿ ನಿಕಟಪೂರ್ವ ಅಧ್ಯಕ್ಷೆ ಶಶಿಕಲಾ ವಸ್ತ್ರದ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಸಿ. ಸೋಮಶೇಖರ ವಹಿಸಲಿದ್ದಾರೆ.

ಶಾಸಕರಾದ ಎಂ.ವೈ. ಪಾಟೀಲ, ಜಿಲ್ಲಾಧಿಕಾರಿಗಳಾದ ಫೌಜಿಯಾ ತರನ್ನುಮ್, ಶ್ರೀ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಪ್ರಭುಲಿಂಗ್ ಮಹಾಗಾಂಕರ್ ಸೇರಿದಂತೆ ಹಲವಾರು ಗಣ್ಯರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಎರಡು ದಿನಗಳ ಕಾಲ ನಿರಂತರವಾಗಿ ನಾಲ್ಕು ಗೋಷ್ಠಿ ನಡೆಯಲಿದ್ದು, ನಾಡಿನ ವಿದ್ವಾಂಸರು ವಿವಿಧ
ವಿಷಯಗಳು ಮಂಡನೆ ಮಾಡಲಿದ್ದಾರೆ ಎಂದರು.

ಈ ಸಮಾವೇಶದಲ್ಲಿ ದಿನಾಂಕ 27 ರಂದು ಜಗದ್ಗುರು ಶಿವರಾತ್ರಿ ದೇಶಿಕಂದ್ರ ಮಹಾಸ್ವಾಮಿಗಳು, ಜಗದ್ಗುರು ಶ್ರೀ ಸಿದ್ದರಾಮ ಮಹಾಸ್ವಾಮಿಗಳು ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಸಮಾರೋಪ ನುಡಿಗಳನ್ನು ಬೀದರಿನ ಅಕ್ಕ ಗಂಗಾಂಬಿಕಾ ಆಡಲಿದ್ದಾರೆ. ಡಾ. ಸಿ. ಸೋಮಶೇಖರ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಜೀವಶಾಸ್ತ್ರ ಮತ್ತು ಪರಿಸರ ವಿಜ್ಞಾನ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ಅವರು ಮೀನಾಕ್ಷಿ ಬಾಳಿ ಯವರು ರಚಿಸಿದ “ವಚನ ನಿಜ ದರ್ಶನ ” ಕೃತಿ ಲೋಕಾರ್ಪಣೆ ಮಾಡಲಿದ್ದಾರೆ . ಕೆ.ಕೆ.ಆರ್‌.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು ಡಾ. ತಿಪ್ಪೇರುದ್ರಸ್ವಾಮಿ ರಚಿಸಿದ “ಜಡದಲ್ಲಿ ಜಂಗಮ ” ಕೃತಿ ಲೋಕಾರ್ಪಣೆ ಗೊಳಿಸಲಿದ್ದಾರೆ ಎಂದರು.

ಮುಖ್ಯಮಂತ್ರಿಗಳ ಸಲಹೆಗಾರ ಹಾಗೂ ಆಳಂದ ಶಾಸಕ ಬಿ. ಆರ್ ಪಾಟೀಲ, ಬಸವಕಲ್ಯಾಣ ಶಾಸಕ ಶರಣು ಸಲಗರ, ವಿಧಾನಪರಿಷತ್ ಸದಸ್ಯರಾದ ಶಶಿಲ್ ಜಿ. ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಚಂದ್ರಶೇಖರ್ ಪಾಟೀಲ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್, ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ಮುಖಂಡರಾದ ನಿತಿನ್ ಗುತ್ತೇದಾರ್, ಶರಣು ಮೋದಿ, ಸೋಮಶೇಖರ್ ಗೋ. ನಾಯಕ್, ಬಸವರಾಜ ಪಾಟೀಲ ಸೋಮನಹಳ್ಳಿ, ಗೌರವಾಧ್ಯಕ್ಚ ಕುಪೇಂದ್ರ ಪಾಟೀಲ, ಯುವ ಘಟಕದ ಅಧ್ಯಕ್ಷ ಪ್ರಕಾಶ ಅಂಗಡಿ ಉಪಸ್ಥಿತರಿರಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಕರ ದೇವನೂರ ವಹಿಸಲಿದ್ದಾರೆ ಎಂದು ತಿಳಿಸಿದರು.

ಜಯನಗರದ ಅನುಭವ ಮಂಟಪ ಮಾರ್ಗವಾಗಿ ಸರ್ಕಾರಿ ಮಹಾವಿದ್ಯಾಲಯದಿಂದ ಜೈ ಭವಾನಿ ಕನ್ವೆನ್ಷನ್ ಹಾಲ್ ವರೆಗೆ ಅಕ್ಕಮಹಾದೇವಿ ಭಾವಚಿತ್ರ ಹಾಗೂ ವಚನ ಸಾಹಿತ್ಯ ಗ್ರಂಥಗಳ ಮೆರವಣಿಗೆ ಜರುಗಲಿದೆ.

ಕಲಬುರ್ಗಿ ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖುಬಾ ಅವರು ಉದ್ಘಾಟಿಸಲಿದ್ದಾರೆ. ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಮನಿ ಮತ್ತು ಕಲ್ಬುರ್ಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಭಾಗವಹಿಸಲಿದ್ದಾರೆ ಎಂದರು.

Share This Article
1 Comment

Leave a Reply

Your email address will not be published. Required fields are marked *