ಬಸವಕಲ್ಯಾಣದಲ್ಲಿ‌ ಕನ್ನೇರಿ ಸ್ವಾಮಿ ಸಮಾವೇಶಕ್ಕೆ ಅನುಮತಿ‌ ನಿರಾಕರಣೆ

ಬಸವ ಮೀಡಿಯಾ
ಬಸವ ಮೀಡಿಯಾ

ಬೀದರ್

ಕನ್ನೇರಿ ಸ್ವಾಮಿ ನೇತೃತ್ವದಲ್ಲಿ ಜೂನ್ 28 ಆಯೋಜಿಸಿದ್ದ ಬಸವಾದಿ ಶಿವಶರಣರ ಹೆಸರಿನ ಬೃಹತ್ ಹಿಂದೂ ಸಮಾವೇಶಕ್ಕೆ ಅನುಮತಿ ನೀಡಲು ತಾಲ್ಲೂಕು ಆಡಳಿತ ನಿರಾಕರಿಸಿದೆ.

ಬಸವಕಲ್ಯಾಣದ ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ನಡೆಸಲು ಆಯೋಜಕರು ಅನುಮತಿ ಕೋರಿದ್ದರು.

ಕನ್ನೇರಿ ಸ್ವಾಮಿ ಬಸವಣ್ಣನವರ ಅನುಯಾಯಿಗಳು ಹಾಗೂ ಬಸವತತ್ವ ಪ್ರಚಾರ ಮಾಡುತ್ತಿರುವ ಮಠಾಧೀಶರನ್ನು ಅವಾಚ್ಯ ಪದಗಳಿಂದ ನಿಂದಿಸಿ ಅವಹೇಳನ ಮಾಡಿದ್ದಾರೆ. ಈ ಬಗ್ಗೆ ಕರ್ನಾಟಕ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ವಿವಿಧ ಬಸವಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವುದರಿಂದ ಅನುಮತಿ ನಿರಾಕರಿಸಲಾಗಿದೆ ಎಂದು ಬಸವಕಲ್ಯಾಣ ತಹಶೀಲ್ದಾರ್ ದತ್ತಾತ್ರೇಯ ಗಾದಾ ತಿಳಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Ky8rMVgQct2AZDAbXDYq2U

Share This Article
Leave a comment

Leave a Reply

Your email address will not be published. Required fields are marked *