ಗದಗ
‘ಪರಿಶುದ್ಧ ಗಾಳಿಯನ್ನು ಹೊಂದಿರುವ ಕಪ್ಪತ್ತಗುಡ್ಡ ಉತ್ತರ ಕರ್ನಾಟಕದ ಸಹ್ಯಾದ್ರಿ,’ ಎಂದು ಸಿದ್ಧರಾಮ ಶ್ರೀ ಗುರವಾರ ಹೇಳಿದರು.
ಕಪ್ಪತ್ತಗುಡ್ಡ ಹಚ್ಚಹಸುರಿನಿಂದ ಕಂಗೊಳಿಸುತ್ತಿದ್ದು, ನಾಡಿನ ಮೂಲೆಮೂಲೆಗಳಿಂದ ಪ್ರವಾಸಿಗರು ಬಂದು ಪ್ರಾಕೃತಿಕ ಸೊಬಗನ್ನು ಆನಂದಿಸುತ್ತಿದ್ದಾರೆ’ ಲಿಂಗಾಯತ ಪ್ರಗತಿಶೀಲ ಸಂಘದ 2,707ನೇ ಶಿವಾನುಭವ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಕಪ್ಪತ್ತಗುಡ್ಡ ಉಳಿಸಲು ಜನರನ್ನು, ಪರಿಸರವಾದಿಗಳನ್ನು, ಅನೇಕ ಸಂಘ-ಸಂಸ್ಥೆಗಳನ್ನು, ಶಾಲಾ-ಕಾಲೇಜುಗಳನ್ನು ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಸಂಘಟಿಸಿ ಗಣಿಗಾರಿಕೆ ನಡೆಯದಂತೆ ಹೋರಾಟ ನಡೆಸಿದರು. ಕಪ್ಪತ್ತಗುಡ್ಡದ ಅಭಿವೃದ್ಧಿಗೆ ಸರ್ಕಾರ ಕ್ರಮಕೈಕೊಳ್ಳಬೇಕು. ಎಂದು ಆಗ್ರಹಿಸಿದರು.