ಮೈಸೂರು
ಕರ್ನಾಟಕ ರಾಜ್ಯ ಇಬ್ಬಾಗವಾದರೆ ಒಳ್ಳೆಯದಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಅಧ್ಯಕ್ಷ ಪೂಜ್ಯ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ಮೈಸೂರಿಗೆ ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು ಎಂದು ವಾರ್ತಾ ಭಾರತಿ ವರದಿ ಮಾಡಿದೆ.
ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ಬೇರೆ ಬೇರೆ ಆದರೆ ಉತ್ತರ ಕರ್ನಾಟಕದವರಿಗೂ, ದಕ್ಷಿಣ ಕರ್ನಾಟಕದವರಿಗೂ ಒಳ್ಳೆಯದಾಗುತ್ತದೆ ಎಂದು ಪ್ರತಿಪಾದಿಸಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಇಬ್ಬರು ಅನ್ನೋನ್ಯವಾಗಿ ಹೋದರೆ ಇಲ್ಲಿಯೂ ಒಳ್ಳೆಯದಾಗುತ್ತದೆ. ಇಬ್ಬರು ಮನಸ್ತಾಪ ಬಿಟ್ಟು ರಾಜ್ಯದ ಜನರಿಗೆ ಒಳ್ಳೆಯದನ್ನು ಮಾಡಿ ಜನರ ಸೇವೆ ಮಾಡಿಕೊಂಡು ಹೋಗಬೇಕು ಎಂದು ಕಿವಿಮಾತು ಹೇಳಿದರು.
ಇಬ್ಬರ ನಡುವಿನ ಮನಸ್ಥಾಪ ಗೊತ್ತಿದೆ. ಯಾರೂ ನನ್ನನ್ನು ಭೇಟಿಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು..