ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಹೆಚ್.ಎಸ್.ದ್ಯಾಮೇಶ್ ಭಾಜನ

ಬಸವ ಮೀಡಿಯಾ
ಬಸವ ಮೀಡಿಯಾ

ಈ ಸಾಲಿನ (೨೦೨೪-೨೫) ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಅಧ್ಯಾಪಕ, ರಂಗಕರ್ಮಿ ಹೆಚ್.ಎಸ್. ದ್ಯಾಮೇಶ್ ಭಾಜನರಾಗಿದ್ದಾರೆ. ಕಳೆದ ಮೂರು ದಶಕಗಳಿಂದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ, ಶಿವಸಂಚಾರ, ಭಾರತ ಸಂಚಾರ, ಶಿವದೇಶ ಸಂಚಾರ, ವಚನ ಸಂಚಾರ, ರಂಗಪ್ರಯೋಗಶಾಲೆ ಸೇರಿದಂತೆ ವಿವಿಧ ರಂಗ ಸಂಸ್ಥೆಗಳೊಂದಿಗೆ ಸಂಚಾಲಕರಾಗಿ, ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ, ಲೇಖಕರಾಗಿ, ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಎಲೆಮರೆಯ ಕಾಯಂತೆ ಕೆಲಸ ಮಾಡುತ್ತಿರುವ ದ್ಯಾಮೇಶ್ ಅವರನ್ನು ಗುರುತಿಸಿ ನಾಟಕ ಅಕಾಡೆಮಿ ಪ್ರಶಸ್ತಿ ನೀಡಿರುವುದು ಸಂತೋಷ ತಂದಿದೆ. ಪ್ರಶಸ್ತಿ ಪುರಸ್ಕೃತ ದ್ಯಾಮೇಶ‌ ಅವರನ್ನು ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳು ಅಭಿನಂದಿಸಿದ್ದಾರೆ.

Share This Article
Leave a comment

Leave a Reply

Your email address will not be published. Required fields are marked *