ಬೆಳಗಾವಿ:
ಭಾರತದ ಸ್ವಾತಂತ್ರ್ಯ ಹೋರಾಟ ಹಾಗೂ ಸ್ವಾತಂತ್ರ್ಯೋತ್ತರ ರಾಜಕೀಯ ಪುನರ್ನಿರ್ಮಾಣ ಮತ್ತು ಸಮಾಜಸೇವೆಯ ಕ್ಷೇತ್ರಗಳಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿ ಲಿಂಗೈಕ್ಯರಾದ ಡಾ. ಭೀಮಣ್ಣ ಖಂಡ್ರೆ ಅವರಿಗೆ ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು, ಶ್ರೇಷ್ಟ ವಕೀಲರೂ, ಜನಪ್ರಿಯ ಶಾಸಕರೂ, ಪ್ರಭಾವಿ ಸಚಿವರು ಹಾಗೂ ಲಿಂಗಾಯತ ಸಮಾಜದ ಸಂಘಟಕರಾಗಿ ಭೀಮಣ್ಣ ಖಂಡ್ರೆ ಅವರು ನಾಡಿನಲ್ಲಿ ಸಲ್ಲಿಸಿದ ಸೇವೆ ಸ್ಮರಣೀಯವಾಗಿದೆ.

ಸ್ವಾತಂತ್ರ್ಯ ಹೋರಾಟ, ಸಮಾಜಸೇವೆ, ರಾಜಕೀಯ ನಾಯಕತ್ವ ಮತ್ತು ಧಾರ್ಮಿಕ–ಸಾಂಸ್ಕೃತಿಕ ಸಂಘಟನೆಯಲ್ಲಿ ತಮ್ಮನ್ನು ಸಮರ್ಪಿಸಿಕೊಂಡ ಅವರ ಜೀವನ ಇಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಶ್ರೀಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
