ಬಸವಕಲ್ಯಾಣ
ತಾಲ್ಲೂಕಿನ ಕೊಹಿನೂರ ಗ್ರಾಮದಲ್ಲಿ ಮಹಾತ್ಮ ಬಸವೇಶ್ವರ ಪ್ರತಿಮೆ ಅನಾವರಣ ಹಾಗೂ ಬಸವ ತತ್ವ ಚಿಂತನ ಸಭೆ ಮೇ ೨೩ರಂದು ಸಂಜೆ ೬ಕ್ಕೆ ಜರುಗಲಿದೆ.
ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು, ಹಾರಕೂಡ ಸಂಸ್ಥಾನ ಹಿರೇಮಠದ ಡಾ. ಚನ್ನವೀರ ಶಿವಾಚಾರ್ಯರ ಸಾನ್ನಿಧ್ಯ, ಬಸವ ಮಹಾಮನೆ ಸಂಸ್ಥಾನದ ಡಾ.ಸಿದ್ಧರಾಮ ಶರಣರು ಬೆಲ್ದಾಳ, ಜೈ ಭಾರತ ಮಾತ ಸೇವಾ ಸಮಿತಿ ರಾಷ್ಟ್ರೀಯ ಅಧ್ಯಕ್ಷರಾದ ಹವಾ ಮಲ್ಲಿನಾಥ ಮಹಾರಾಜ ನೇತೃತ್ವ ಹಾಗೂ ಅಂತರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರದ ಪೂಜ್ಯ ಡಾ. ಗಂಗಾಂಬಿಕ ಅಕ್ಕ, ಭಾಲ್ಕಿ ಸಂಸ್ಥಾನ ಹಿರೇಮಠದ ಶ್ರೀ ಗುರುಬಸವ ಪಟ್ಟದ್ದೇವರು ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕ ಶರಣು ಸಲಗರ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಸಾಗರ ಖಂಡ್ರೆ ಮುಖ್ಯ ಅತಿಥಿಗಳಾಗಿರುವರು. ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ, ಡಾ. ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ ಅವರು ಗುರುಬಸವ ಪೂಜೆ ಹಾಗೂ ಷಟಸ್ಥಲ ಧ್ವಜಾರೋಹಣವನ್ನು ಮಾಜಿ ಎಂಎಲ್ಸಿ ವಿಜಯಸಿಂಗ್ ನೆರವೇರಿಸುವರು. ಕರ್ನಾಟಕ
ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ, ಮಾಜಿ ಸಚಿವರಾದ ಬಸವರಾಜ ಪಾಟೀಲ ಅಟ್ಟೂರ, ರಾಜಶೇಖರ ಪಾಟೀಲ ಹುಮನಾಬಾದ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಕಾಂಗ್ರೆಸ್ ಮುಖಂಡ ಧನರಾಜ ತಾಳಂಪಳ್ಳಿ, ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮೀ ಪರಶುರಾಮ ಜಡಗೆ, ಉಪಾಧ್ಯಕ್ಷೆ ರಾಜಶ್ರೀ ಹಿತವಂತ ಅಡೆಪ್ಪಗೋಳ, ಬಸವಕಲ್ಯಾಣ ಬಿಡಿಪಿಸಿ ಅಧ್ಯಕ್ಷ ಬಸವರಾಜ ಕೋರಕೆ ಅತಿಥಿಗಳಾಗಿರುವರು.