ಬೆಂಗಳೂರು
ಲಂಡನ್ನ ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನ ನೀಡುವ ‘ಶ್ರೀ ಸಿದ್ಧಗಂಗಾ ಸಿರಿ ಪ್ರಶಸ್ತಿ’ಗೆ ಸಾಹಿತಿ ಕುಂ. ವೀರಭದ್ರಪ್ಪ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಬಳಿಕ, ಅವರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುತ್ತಿದೆ. ಸಿದ್ಧಗಂಗಾ ಕ್ಷೇತ್ರದಲ್ಲಿ ವ್ಯಾಸಂಗ ಮಾಡಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಪ್ರತಿಭೆಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಸ್. ಮಹದೇವಯ್ಯ ತಿಳಿಸಿದ್ದಾರೆ.
ಡಿಸೆಂಬರ್ 16 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.