ಬೆಂಗಳೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಅವರು ಬುಧವಾರ ಕಿತ್ತೂರು ರಾಣಿ ಚೆನ್ನಮ್ಮ ಅವರ 200ನೇ ವರ್ಷದ ವಿಜಯ ಜ್ಯೋತಿ ಯಾತ್ರೆಗೆ ವಿಧಾನಸೌಧದ ಮುಂಭಾಗ ಚಾಲನೆ ನೀಡಿದರು.
ಚೆನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಅಣ್ಣಾ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ, ಎಚ್.ಕೆ.ಪಾಟೀಲ, ಪ್ರಿಯಾಂಕ ಖರ್ಗೆ, ಶಾಸಕರಾದ ರಿಜ್ವಾನ್ ಅರ್ಷದ್, ರಾಜು ಕಾಗೆ, ಎನ್.ಎ.ಹ್ಯಾರಿಸ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉನ್ನತ ಅಧಿಕಾರಿಗಳು ಸೇರಿದಂತೆ ಬೆಳಗಾವಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಯೋಜಿತವಾಗಿರುವ ಚೆನ್ನಮ್ಮನ ಕಿತ್ತೂರು ಉತ್ಸವ-2024ದ ಅಂಗವಾಗಿ ಕಾರ್ಯಕ್ರಮ ನಡೆಯಿತು.