ಬೈಲಹೊಂಗಲ
ಮಕ್ಕಳ ಭವಿಷ್ಯಕ್ಕಾಗಿ ಲಿಂಗಾಯತ ಧರ್ಮದ ಹೋರಾಟಕ್ಕೆ ಎಲ್ಲ ಪಂಗಡ, ಸಂಘಟನೆಗಳು ಒಗ್ಗೂಡಬೇಕೆಂದು
ಹುಬ್ಬಳ್ಳಿಯ-ಬೈಲಹೊಂಗಲದ ರುದ್ರಾಕ್ಷಿಮಠದ ಪೂಜ್ಯ ಬಸವಲಿಂಗ ಸ್ವಾಮೀಜಿ ಶನಿವಾರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವಗುರು ಬಸವಣ್ಣನವರನ್ನು ಸಾಂಸ್ಕ್ರತಿಕ ನಾಯಕ ಎಂಬ ಘೋಷಣೆ ಮಾಡಿ ಜಾಗತಿಕ ಮಟ್ಟಕ್ಕೆ ಗೌರವ ತಂದಿದ್ದು ಸಮಾಜಕ್ಕೆ ಹೆಮ್ಮೆಯಾಗಿದೆ ಎಂದರು.
ಅವರು ಪಟ್ಟಣದ ಶ್ರೀ ಶಿವಬಸವ ಕಲ್ಯಾಣ ಮಂಟಪದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕಾ ಘಟಕದ ಆಶ್ರಯದಲ್ಲಿ ಜರುಗಿದ 2023-24 ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾನಿದ್ಯ ವಹಿಸಿ ಮಾತನಾಡಿದರು.
ಲಿಂಗಾಯತ ಧರ್ಮದ ಒಳಪಂಗಡಗಳನ್ನು ಒಂದುಗೂಡಿಸುವಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಾಗತಿಕ ಲಿಂಗಾಯತ ಮಹಾಸಭಾದ ಸಾಧನೆಗಳು ಸಮಾಜದಲ್ಲಿ ಯಶಸ್ವಿಯಾಗಲಿ ಎಂದು ಬೆಳಗಾವಿ- ನಾಗನೂರಿನ ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
ಗುರುಗುಂಟಾದ ಸದಾನಂದ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಡಾ.ಶಾಸಕ ಮಹಾಂತೇಶ ಕೌಜಲಗಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.