ಹೊಳಲ್ಕೆರೆ
ಡಾ. ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ಟ್ರಸ್ಟ್ ನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ನಡೆದ ಸಭೆಯಲ್ಲಿ ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಶ್ರೀಗಳನ್ನು ಆಯ್ಕೆ ಮಾಡಿದರು.
ನಂತರ ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಆವರಣದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮೀಜಿ, ಹಾಗೂ ಸೂರ್ ದಾಸ್ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ಆಶ್ರಮದ ಶಾಲೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿಯವರು ಕುಗ್ರಾಮವಾದ ಮಲ್ಲಾಡಿಹಳ್ಳಿಯನ್ನು ಗುರಿತಿಸಿದ ರಾಘವೇಂದ್ರ ಸ್ವಾಮೀಜಿಯವರು ತಮ್ಮ ಶಿಕ್ಷಣ ಸಂಸ್ಕಾರದ ಕ್ರಾಂತಿಯ ಈ ಗ್ರಾಮವನ್ನು ದೇಶದ ಗಮನ ಸೆಳೆಯುವಂತೆ ಮಾಡಿದರು, ಎಂದು ಹೇಳಿದರು.