ಬಸವ ಸಮಿತಿಯ ಮಹಾನ್ ದಾರ್ಶನಿಕ ಬಸವಣ್ಣ’ ಗ್ರಂಥ ಲೋಕಾರ್ಪಣೆ

ಬೈಲಹೊಂಗಲ

ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ‘ಮಹಾನ್ ದಾರ್ಶನಿಕ ಬಸವಣ್ಣ’ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಪಟ್ಟಣದ ಹೊಸೂರು ರಸ್ತೆಯ ಶ್ರೀ ಭಗಳಾಂಬಾದೇವಿ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಗ್ರಂಥ ಲೋಕಾರ್ಪಣೆಗೊಳಿಸಿದ ಶ್ರೀ ಭಗಳಾಂಬಾದೇವಿ ದೇವಸ್ಥಾನದ ಧರ್ಮಾಧಿಕಾರಿ ಪೂಜ್ಯ ಡಾ. ವೀರಯ್ಯಸ್ವಾಮಿಗಳು ಮಾತನಾಡಿ, ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ‘ಮಹಾನ್ ದಾರ್ಶನಿಕ ಬಸವಣ್ಣ’ ಗ್ರಂಥ ಬಸವಣ್ಣನವರ ಜನನ, ಕಪ್ಪಡಿ ಸಂಗಮದಲ್ಲಿ ಬಸವಣ್ಣನವರ ವಿದ್ಯಾಭ್ಯಾಸ, ಕಾಯಕ ಜೀವನ, ಕಲ್ಯಾಣದಲ್ಲಿ ಬಸವಣ್ಣನವರ ಸಾಧನೆಗಳು, ಬಸವ ಮಹಾಮನೆ, ಪ್ರಸಾದ- ದಾಸೋಹ, ಅನುಭವ ಮಂಟಪದ ಸ್ಥಾಪನೆ, ಬಸವ ಪೂರ್ವದ ಪರಿಸ್ಥಿತಿ ಹಾಗೂ ನಂತರದ ಸಾಮಾಜಿಕ, ಆರ್ಥಿಕ, ಸಾಹಿತ್ಯಕ, ಶೈಕ್ಷಣಿಕ ಪರಿಸ್ಥಿತಿ ವಿವರಗಳೊಂದಿಗೆ ಬಸವಣ್ಣನವರ ಘನ ವ್ಯಕ್ತಿತ್ವ ಹಾಗೂ ಸಂದೇಶಗಳನ್ನು ಜನರಿಗೆ ತಲುಪಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ.ವಾಯ್. ನ ಆರೂಢ ಜ್ಯೋತಿ ಚೈತನ್ಯ ಶಾಲೆಯ ಶಿಕ್ಷಕರಾದ ಶಿವಾನಂದ ಬಸನಾಯ್ಕ ಪಟ್ಟಿಹಾಳ (ಇಂಚಲ) ಅವರು ಮಾತನಾಡಿ, ಸಕಲ ಜೀವಾತ್ಮರಿಗೆ ಲೇಸನೆ ಬಯಸಿದ ಬಸವಣ್ಣನವರು ಸ್ವತಂತ್ರ ವಿಚಾರವಾದಿ, ಸಮತಾವಾದಿ, ದಲಿತೋದ್ಧಾರಕ, ಶ್ರೇಷ್ಠ ಅರ್ಥಶಾಸ್ತ್ರಜ್ಞ, ಸ್ತ್ರೀಕುಲೋದ್ಧಾರಕ, ಪ್ರಾಮಾಣಿಕ ಬದುಕಿನ ಪಾರದರ್ಶಕ ವ್ಯಕ್ತಿತ್ವದ ಮಹಾನ್ ದಾರ್ಶನಿಕರಾಗಿದ್ದರು. ಇಂದಿನ ವಿದ್ಯಾರ್ಥಿಗಳಲ್ಲಿ ಇಂತಹ ಕಲ್ಪನೆ ಬಿತ್ತುವುದು ಶಿಕ್ಷಕರಾದ ನಮ್ಮ ಜವಾಬ್ದಾರಿಯಾಗಿದೆ ಎಂದರು.

ಕೇಂದ್ರ ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಹಿರಿಯ ಸದಸ್ಯರು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಅವರು ಮಾತನಾಡಿ, ಬಸವ ಸಮಿತಿಯು ಈಗಾಗಲೇ 50 ಭಾಷೆಗಳಲ್ಲಿ ವಚನಗಳನ್ನು ಭಾಷಾಂತರಿಸಿದೆ. ಶಾಲೆಯಿಂದ ಶಾಲೆಗೆ, ಕಾಲೇಜಿನಿಂದ ಕಾಲೇಜಿಗೆ, ವಚನಕಾರರು ಮತ್ತು ವ್ಯಕ್ತಿತ್ವ ಕಾರ್ಯಕ್ರಮವನ್ನು ಹಮ್ಮಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನವಾಗಿದೆ ಎಂದು ಹೇಳಿದರು.

ಬಸವ ಅಭಿಮಾನಿ ವಿನೋದ ತೋಡಕರ ಸ್ವಾಗತಿಸಿದರು, ಕುಮಾರಿ ಗಾಯತ್ರಿ ಬಡಕನ್ನವರ ಪ್ರಾರ್ಥನೆಯೊಂದಿಗೆ ನಿರೂಪಿಸಿದರು, ಅಣ್ಣಪ್ಪ ಬಂಡಿವಡ್ಡರ ವಂದಿಸಿದರು.

ಸುರೇಶ ಬಡಕನ್ನವರ, ಸುಲೋಚನಾ ಬಡಕನ್ನವರ, ಹನುಮಂತ ಬಂಡಿವಡ್ಡರ ಮತ್ತಿತರರು ಉಪಸ್ಥಿತರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JREWkVu0WPE5tE1y0tzNQ1

Share This Article
Leave a comment

Leave a Reply

Your email address will not be published. Required fields are marked *

ಪ್ರಧಾನ ಕಾರ್ಯದರ್ಶಿ ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕ ಬೆಳಗಾವಿ.