ಬೆಂಗಳೂರು
ಜಾತಿ ಗಣತಿ ವಿಷಯದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಇನ್ನೂರಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಬಲ ಸೂಚಿಸಿದ್ದಾರೆ.
ವೀರಶೈವ ಮಹಾಸಭಾದ ಕಚೇರಿಯಲ್ಲಿ ಗುರುವಾರ ನಡೆದ “ವೀರಶೈವ ಲಿಂಗಾಯತ ಏಕತಾ ಸಮಾವೇಶ”ದ ಪೂರ್ವಭಾವಿ ಸಭೆಯಲ್ಲಿ ಸ್ವಾಮೀಜಿಗಳು ಭಾಗವಹಿಸಿದರು.
ಮಹಾಸಭೆಯ ಅಧ್ಯಕ್ಷರಾದ ಡಾ, ಶಾಮನೂರು ಶಿವಶಂಕರಪ್ಪ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈಶ್ವರ್ ಖಂಡ್ರೆ, ಶಂಕರ್ ಬಿದರಿ ಮತ್ತು ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.
ಮಹಾಸಭಾ ಕಾರ್ಯದರ್ಶಿ ಎಚ್ ಎಂ ರೇಣುಕ ಪ್ರಸನ್ನ ಸ್ವಾಗತ ಮಾಡಿದರು.
ವೀರಶೈವ ಮಹಾಸಭೆಯ ನೇತೃತ್ವದಲ್ಲಿ ಏಕತಾ ಸಮಾವೇಶ ಸೆಪ್ಟೆಂಬರ್ 19 ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿದೆ.