ಮಂಡ್ಯ
ಬಸವಣ್ಣನಂತಹ ಮಹಾನ್ ದಾರ್ಶನಿಕ ಪುರುಷರನ್ನು ನಿತ್ಯವೂ ಸ್ಮರಿಸುವ ಸಲುವಾಗಿ ಮಂಡ್ಯದಲ್ಲಿ ಪುತ್ಥಳಿ ಹಾಗೂ ಬಸವಭವನ ಎರಡನ್ನೂ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುವುದು ಎಂದು ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.
ಮಂಡ್ಯ ನಗರದ ಕಲಾಮಂದಿರದಲ್ಲಿ ನಡೆದ ಸಾಂಸ್ಕೃತಿಕ ನಾಯಕ ಬಸವಣ್ಣನವರ 892ನೇ ಜನ್ಮದಿನಾಚರಣೆಯಲ್ಲಿ ವಿವಿಧ ಬಸವಾಭಿಮಾನಿಗಳ ಸಂಘಟನೆಯ ಮುಖಂಡರು ನೀಡಿದ ಮನವಿಗೆ ಸಚಿವರು ಸ್ಪಂದಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಸರಿಸುಮಾರು ಮೂರು ಲಕ್ಷಮಂದಿ ಲಿಂಗಾಯತ ಸಮುದಾಯವಿದ್ದು ಕಳೆದ ಹಲವಾರು ವರ್ಷಗಳಿಂದ ವಿಶ್ವಗುರು ಬಸವಣ್ಣನವರ ಪುತ್ಥಳಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸ್ಥಾಪಿಸಬೇಕೆಂಬ ಬೇಡಿಕೆ ಈಡೇರಿಸಬೇಕೆಂದು ಲಿಂಗಾಯತ ಮಹಾಸಭಾ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಮನವಿ ನೀಡಿದರು.
ಸ್ಥಳೀಯ ಬಸವ ಸಂಘಟನೆಗಳ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.