ಮಂಗಳೂರು
12 ವರ್ಷದ ಹಿಂದೆ ನಡೆದಿದ್ದ ಮಂಗಳೂರು ಹೋಂ ಸ್ಟೇ ದಾಂಧಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಂಗಳವಾರ ಆದೇಶ ಹೊರಡಿಸಿದೆ.
2012ರ ಜುಲೈ 28ರಂದು ನಗರದ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇನಲ್ಲಿ ನಡೆದ ಬರ್ತ್ಡೇ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ-ಯುವತಿಯರ ಮೇಲೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು ಎಂದು ಆರೋಪಿಸಿ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
44 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.ಈ ಪೈಕಿ ಮಹೇಶ್, ಜಗದೀಶ್, ಪ್ರಕಾಶ್ ಎಂಬವರು ಸಾವನ್ನಪ್ಪಿದ್ದರು.
ವಿದ್ಯಾರ್ಥಿನಿಯರ ಪೈಕಿ ಇಬ್ಬರು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಮಕ್ಕಳಾಗಿದ್ದು, ಇದು ರಾಷ್ಟ್ರಮಟ್ಟದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು.
ದಾಂಧಲೆ ಕೋರರು ಐವರು ಯುವತಿಯರ ಸಹಿತ ಪಾರ್ಟಿಯಲ್ಲಿದ್ದ 13 ಮಂದಿಗೆ ಥಳಿಸಿ, ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿದ್ದಾರೆ ಎಂದೂ ಆರೋಪಿಸಲಾಗಿತ್ತು.
ಸುದೀರ್ಘ ವಿಚಾರಣೆ ಬಳಿಕ ಕೊನೆಗೂ ಆರೋಪಿಗಳನ್ನು ಸಾಕ್ಷಾಧಾರಗಳ ಕೊರತೆಗಳಿಂದ ಖುಲಾಸೆಗೊಳಿಸಿ ಮಂಗಳವಾರ ನ್ಯಾಯಾಧೀಶರಾದ ಕಾಂತರಾಜು ತೀರ್ಪು ಪ್ರಕಟಿಸಿದ್ದಾರೆ.