ಗದಗ
‘ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರೊಬ್ಬ ಶ್ರೇಷ್ಠ ಹಾಗೂ ಅನುಭವಿ ಆರ್ಥಿಕ ತಜ್ಞರಾಗಿದ್ದರು’ ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಹೇಳಿದ್ದಾರೆ.
ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಆಗಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ಹಣಕಾಸು ಸಚಿವರಾಗಿ ಇದೆಲ್ಲಕ್ಕೂ ಮಿಗಿಲಾಗಿ ದೇಶದ ನೆಚ್ಚಿನ ಪ್ರಧಾನಿಯಾಗಿ ಅವರು ಸಲ್ಲಿಸಿದ ಸೇವೆ ಅಪೂರ್ವ ಹಾಗೂ ಅನುಪಮ ಎಂದು ತಿಳಿಸಿದ್ದಾರೆ.
‘ದೇಶದ ಅರ್ಥ ವ್ಯವಸ್ಥೆಗೆ ಭದ್ರಬುನಾದಿ ಒದಗಿಸಿದ ಶ್ರೇಯಸ್ಸು ಡಾ. ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.