ರಾಯಚೂರು
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವವನ್ನು ಆಗಸ್ಟ್ 18 ರಿಂದ 24ವರೆಗೆ ಆಯೋಜಿಸಲಾಗಿದೆ ಎಂದು ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ತಿಳಿಸಿದರು.
ಸುಕ್ಷೇತ್ರದ ಶ್ರೀಮಠದಲ್ಲಿ ಬುಧವಾರ ಕರೆದಿದ್ದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ರೀಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿಗೆ ಶ್ರೀಮಠಕ್ಕೆ ಆಗಸ್ಟ್ 19ರಂದು ಆಗಮಿಸುತ್ತಿದ್ದಾರೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಂದ ಸಚಿವರು, ಶಾಸಕರು ಸೇರಿ ಹಲವಾರು ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.
ಇದರೊಂದಿಗೆ ಡಾ.ಸುಬುಧೇಂದ್ರ ತೀರ್ಥರು ಇನ್ಫೋಸಿಸ್ನ ಮುಖ್ಯಸ್ಥೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ನಾರಾಯಣಮೂರ್ತಿ ಅವರು ಐದು ದಿನಗಳ ಕಾಲ ಶ್ರೀಮಠದಲ್ಲಿಯೇ ಇದ್ದು ಆರಾಧನಾ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.