ಮೈಸೂರು
“ಆಷಾಢದಲ್ಲಿ ಸಿದ್ದಲಿಂಗೇಶ್ವರ ದೇವಾಲಯದ ಶಿಲಾನ್ಯಾಸ ನಡೆಯುತ್ತಿರುವುದು ಶ್ಲಾಘನೀಯ. ದೇಶದ ಹಲವು ಭಾಗಗಳಲ್ಲಿ ಸಂಚರಿಸಿ ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತಿದ ಸಿದ್ದಲಿಂಗೇಶ್ವರ ಸ್ವಾಮೀಜಿಗೆ ವರ್ಷದ 365 ದಿನವೂ ಶುಭ ದಿನ,” ಎಂದು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ರವಿವಾರ ಹೇಳಿದರು.
ನಗರದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು

ಜೆ.ಪಿ.ನಗರದ ಸಿಎ ನಿವೇಶನದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಸಮಿತಿ ಟ್ರಸ್ಟ್‌ನಿಂದ ಕಟ್ಟಡ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ‘ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಈ ನಿವೇಶನವನ್ನು ದೇವಾಲಯ ನಿರ್ಮಾಣಕ್ಕೆ ನೀಡಲಾಯಿತು. ಯಡಿಯೂರು ಮಾದರಿಯಲ್ಲಿ ಇಲ್ಲಿ ದೇವಾಲಯ ನಿರ್ಮಿಸಲಾಗುತ್ತಿರುವುದು ಸಂತಸ ತಂದಿದೆ’ ಎಂದರು.

ಶಾಸಕರಾದ ಜಿ.ಟಿ.ದೇವೇಗೌಡ, ಎಚ್.ಎಂ. ಗಣೇಶ್‌ಪ್ರಸಾದ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ನಿರಂಜನ್, ಟ್ರಸ್ಟ್‌ನ ಗೌರವಾಧ್ಯಕ್ಷ ಎಸ್.ಸಿ.ಅಶೋಕ್, ಅಧ್ಯಕ್ಷ ಚಂದ್ರಶೇಖರಶೆಟ್ಟಿ, ನಗರಪಾಲಿಕೆ ಮಾಜಿ ಸದಸ್ಯ ಎಂ.ಪ್ರದೀಪ್‌ಕುಮಾರ್, ಈಶ್ವರ್, ಸಿದ್ದೇಶ್, ನಾಗೇಂದ್ರ ಭಾಗವಹಿಸಿದ್ದರು.