ಚಿತ್ರದುರ್ಗ
ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಶ್ರೀ ಜಯದೇವ ವಿದ್ಯಾರ್ಥಿ ನಿಲಯಕ್ಕೆ ೨೦೨೫-೨೬ನೇ ಸಾಲಿನಲ್ಲಿ ಪ್ರವೇಶ ಬಯಸುವ ೧ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಲಿಂ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಕಳೆದ ಆರು ದಶಕಗಳ ಹಿಂದೆ ಬಡ, ಹಿಂದುಳಿದ ಮತ್ತು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಅನುಕೂಲವಾಗುವಂತೆ ಶ್ರೀ ಮಠದಲ್ಲಿ ಉಚಿತ ಊಟ-ವಸತಿ ಸೌಲಭ್ಯವುಳ್ಳ ವಿದ್ಯಾರ್ಥಿ ನಿಲಯವನ್ನು ಆರಂಭಿಸಿದರು.
ಅಂದಿನಿಂದ ಪ್ರತಿವರ್ಷ ವಿದ್ಯಾರ್ಥಿ ನಿಲಯದಲ್ಲಿ ಸರ್ವ ಜನಾಂಗದ ೬೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ೪ ಮತ್ತು ೧೩ಕ್ಕೆ ಹೊಂದಿಕೊಂಡು ಸುಂದರ ಹಸಿರು ವಾತಾವರಣದಲ್ಲಿ ವಿದ್ಯಾರ್ಥಿ ನಿಲಯವಿದ್ದು, ೭ನೇ ತರಗತಿಯಿಂದ ದ್ವಿತೀಯ ಪದವಿವರೆಗೆ ವಿದ್ಯಾಭ್ಯಾಸ ಮಾಡುವ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ಚಿತ್ರದುರ್ಗ ನಗರದಲ್ಲಿರುವ ವಿದ್ಯಾಪೀಠದ ಪಾಲಿಟೆಕ್ನಿಕ್, ಕೈಗಾರಿಕಾ ತರಬೇತಿ, ಪದವಿ, ಪದವಿಪೂರ್ವ, ಪ್ರೌಢ, ಪ್ರಾಥಮಿಕ, ನರ್ಸರಿ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಪ್ರವೇಶಾವಕಾಶ ಕಲ್ಪಿಸಲಾಗುವುದು.
೨೦೨೫-೨೬ನೇ ಸಾಲಿನಲ್ಲಿ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲಿಚ್ಚಿಸುವ ಆಸಕ್ತರು ವ್ಯವಸ್ಥಾಪಕರು, ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠ, ಚಿತ್ರದುರ್ಗ, ದೂ. ೯೮೮೬೮೪೦೭೩೭, ೯೫೩೮೪೨೧೨೨೨, ೯೯೦೧೪೮೯೧೦೫ ಇವರನ್ನು ಸಂಪರ್ಕಿಸಲು ಶ್ರೀಮಠದ ಪ್ರಕಟಣೆ ತಿಳಿಸಿದೆ.