ಚಿತ್ರದುರ್ಗ
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಇಂದು ಅನುಭವ ಮಂಟಪ ಶೂನ್ಯ ಪೀಠದ ಪ್ರಥಮ ಅಧ್ಯಕ್ಷರಾದ ಅಲ್ಲಮಪ್ರಭುದೇವರ ಅವರ ಶರಣೋತ್ಸವವನ್ನು ಹಾಗೂ ನೂತನ ವರ್ಷಾರಂಭ ಸಮಾರಂಭ ಶ್ರೀಮಠದ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಕರ್ತೃವಿನ ಸನ್ನಿಧಾನಲ್ಲಿ ನೇರವೇರಿತು.
ಸಮಾರಂಭವು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮೀಜಿ, ದಾವಣಗೆರೆಯ ವಿರಕ್ತಮಠದ ಡಾ. ಬಸವ ಪ್ರಭು ಮಹಾಸ್ವಾಮಿಗಳು, ಗುರುಮಠಕಲ್ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಮಹಾಸ್ವಾಮೀಜಿ ಸಾನಿಧ್ಯದಲ್ಲಿ, ಅಭಿಮಾನಿ ಭಕ್ತರುಗಳ ಉಪಸ್ಥಿತಿಯಲ್ಲಿ ನೆರವೇರಿತು.