ಶೂನ್ಯಪೀಠ ಪರಂಪರೆಯ ಮುರುಘಾ ಮಠದಲ್ಲಿ ಶೂನ್ಯಪೀಠದ ಪ್ರಥಮ ಅಧ್ಯಕ್ಷ ಅಲ್ಲಮಪ್ರಭು ದೇವರ ಭಾವಚಿತ್ರ ಹಾಗೂ ಜಯದೇವ ಸ್ವಾಮೀಜಿಯ ಬೆಳ್ಳಿ ಪುತ್ಥಳಿ ಇಟ್ಟು ಅಕ್ಟೋಬರ್ 13 ಶೂನ್ಯ ಪೀಠಾರೋಹಣ ನೆರವೇರಿಸಲಾಯಿತು.
ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಅವರು ಜಯದೇವ ಶ್ರೀಗಳ ಬೆಳ್ಳಿ ಪುತ್ಥಳಿಗೆ ಪೂಜೆ ಸಲ್ಲಿಸಿ, ಬಳಿಕ ಭದ್ರತೆಯಲ್ಲಿ ರಾಜಾಂಗಣಕ್ಕೆ ತಂದು ಶೂನ್ಯ ಪೀಠಾರೋಹಣ ನೆರವೇರಿಸಿದರು.
ಕಾರ್ಯಕ್ರಮದ ಅಂಗವಾಗಿ ಧರ್ಮಗುರು ಬಸವಣ್ಣನವರ ಮತ್ತು ಅಲ್ಲಮಪ್ರಭುದೇವರ ಭಾವಚಿತ್ರಗಳ ಹಾಗೂ ಪ್ರಾಚೀನಹಸ್ತ ಪ್ರತಿಗಳ ಮೆರವಣಿಗೆ ನಡೆಯಿತು.