ಬಸವಣ್ಣನವರ ಚಿಂತನೆಯಂತೆ ಬದುಕಿದ ಎಸ್ ನಿಜಲಿಂಗಪ್ಪ ನಮ್ಮ ಆದರ್ಶ: ಸಿಎಂ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಜ್ಯಾತ್ಯತೀತ ತತ್ವ, ಬಸವಣ್ಣನವರ ಚಿಂತನೆ ಪ್ರತಿಬಿಂಬಿಸುವ ಎಸ್ ನಿಜಲಿಂಗಪ್ಪನವರ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು, ಎಂದು ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾ‌ರ್ ಶನಿವಾರ ಹೇಳಿದರು.

ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಸರಳತೆ ನಿಜಲಿಂಗಪ್ಪ ಅವರ ಆಸ್ತಿ. ಅವರ ಆಸ್ತಿ ಬೇರೆಯವರ ಪಾಲಾಗಬಾರದು ಎಂದು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಿತು.

ನಮ್ಮ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು ನಿಜಲಿಂಗಪ್ಪ ಅವರು.
ಅವರ ಬಳಿಕ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ, ಎಂದು ಹೇಳಿದರು.

ಸಚಿವರಾದ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ ಸೇರಿದಂತೆ ಹಲವರು ಹಾಜರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/LcykjUHphtT2VDkfrKC3PM

Share This Article
Leave a comment

Leave a Reply

Your email address will not be published. Required fields are marked *