ಬೆಂಗಳೂರು
ಬೆಂಗಳೂರಿನಲ್ಲಿಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತ್ರತ್ವದ ನಿಯೋಗದೊಂದಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರ ಜೊತೆ ಸಮಾಲೋಚನೆ ನಡೆಯಿತು.
ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸಚಿವರಾದ ಶಿವರಾಜ ತಂಗಡಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ, ಬಾಬಾ ಸಾಹೇಬ ಪಾಟೀಲ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಸೇರಿದಂತೆ ಪಂಚಮಸಾಲಿ ಸಮಾಜದ ಅನೇಕ ಮುಖಂಡರು ಉಪಸ್ಥಿತರಿದ್ದರು.

ಈ ಮುಂಚೆ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗುವ ಸಾಧ್ಯತೆ ಇದ್ದಿದ್ದರಿಂದ ಸಭೆ ರದ್ದಾಗಿತ್ತು. ಆದರೆ ಬಸವಜಯ ಮೃತ್ಯುಂಜಯ ಸ್ವಾಮಿಗಳು ಅಸಮಾಧಾನ ವ್ಯಕ್ತ ಪಡಿಸಿದ ಮೇಲೆ ಸಭೆ ಮತ್ತೆ ನಡೆದಿದೆ.
