ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ವಿಜಯಾನಂದ್ ಕಾಶಪ್ಪನವರ್ ಆಯ್ಕೆ

ಬಸವ ಮೀಡಿಯಾ
ಬಸವ ಮೀಡಿಯಾ

ಪ್ರಧಾನ ಕಾರ್ಯದರ್ಶಿಯಾಗಿ ನೀಲಕಂಠ ಅಸೂಟಿ, ಗೌರವ ಅಧ್ಯಕ್ಷ ಪ್ರಬಣ್ಣ ಹುಣಸಿಕಟ್ಟಿ

ಹುಬ್ಬಳ್ಳಿ

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಅವರು ಗುರುವಾರ ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿಯ ಫರ್ನ್ ಹೋಟೆಲ್‌ನಲ್ಲಿ ನಡೆದ ಸದಸ್ಯರುಗಳ ಸಭೆಯಲ್ಲಿ ಟ್ರಸ್ಟಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿಯಾಗಿ ನೀಲಕಂಠ ಅಸೂಟಿ, ಟ್ರಸ್ಟ್‌ನ ಕಾರ್ಯಧ್ಯಕ್ಷರಾಗಿ ರಾಜಶೇಖರ ಮೆಣಸಿನಕಾಯಿ ಹಾಗೂ ಗೌರವ ಅಧ್ಯಕ್ಷರನ್ನಾಗಿ ಪ್ರಬಣ್ಣ ಹುಣಸಿಕಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಯಿತು.

ಈ ಹಿಂದೆ ನೇಮಕಗೊಳಿಸಿದ ರಾಷ್ಟ್ರೀಯ ಘಟಕ, ರಾಜ್ಯ ಯುವ ಘಟಕ, ಮಹಿಳಾ ಘಟಕ ಸೇರಿದಂತೆ ಜಿಲ್ಲಾ ತಾಲೂಕ ಘಟಕಗಳ ಅಧ್ಯಕ್ಷ ಪದಾಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವಿಸರ್ಜಿಸಲಾಯಿತು. ರಾಷ್ಟ್ರೀಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪ್ರಬಣ್ಣ ಹುಣಸಿಕಟ್ಟಿ ರಾಜೀನಾಮೆ ಸಲ್ಲಿಸಿದರು. ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳನ್ನು ಶಾಲು ಹೋದಿಸಿ ಹಾರ ಹಾಕಿ ಸನ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಹಿರಿಯ ಧರ್ಮದರ್ಶಿ ಎಸ್.ಡಿ. ಕೊಳ್ಳಿ ಅವರು ವಹಿಸಿದ್ದರು.

ಇದೇ ಸಂದರ್ಭದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅದರಂತೆ ಶ್ರೀ ಪೀಠದ ಅಡಿಗಲ್ಲು ಸಮಾರಂಭ, ಸಮಾಜದ ಸಂಘಟನೆ ಬಲಪಡಿಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು.

ಟ್ರಸ್ಟ್ ನ ಕಾರ್ಯದರ್ಶಿ ನಂದಕುಮಾರ್ ಪಾಟೀಲ್ ಸ್ವಾಗತ ಹಾಗೂ ಪ್ರಾಸ್ತವಿಕವಾಗಿ ಮಾತನಾಡಿದರು. ಸಭೆಯಲ್ಲಿ ಧರ್ಮದರ್ಶಿಗಳಾದ ಶೇಖರಪ್ಪ ಬಾದವಾಡಗಿ, ಗಂಗಣ್ಣ ಬಾಗೇವಾಡಿ, ಕಲ್ಲಪ್ಪ ಎಲಿವಾಳ, ಕುಮಾರ ಕುಂದನಹಳ್ಳಿ , ಶಿವಾನಂದ ಕಂಠಿ, ಚಂದ್ರಶೇಖರ್ ಹುಣಸಿಕಟ್ಟಿ, ಮುತ್ತಣ್ಣ ಬಾಡಿನ, ಭರತ್ ಅಸೂಟಿ, ಎಂ.ಎಸ್.ಪಾಟೀಲ್, ಎಂ.ಎಸ್‌. ಮಲ್ಲಾಪುರ, ಲಕ್ಷ್ಮಣ ನರಸಾಪುರ್, ಮಹದೇವಪ್ಪ ದಾಟನಾಳ ಸೇರಿದಂತೆ ಮುಂತಾದವರು ಆಗಮಿಸಿದ್ದರು.

ಸ್ವಾಮೀಜಿಗೆ ಹಿನ್ನಡೆ

ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ನೇಮಕ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಗೆ ಹಿನ್ನಡೆಯಾಗಿ ಬಂದಿದೆ.

ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಟ್ರಸ್ಟ್ ನೇಮಿಸಿದೆ. ಉಚ್ಚಾಟಿತ ಬಿಜೆಪಿ ಶಾಸಕ ಬಸನ ಗೌಡ ಯತ್ನಾಳ್ ಪರ ಪ್ರತಿಭಟನೆಗೆ ಮುಂದಾಗಿದ್ದ ಸ್ವಾಮೀಜಿ
ಟ್ರಸ್ಟಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ, ಅವರನ್ನೇ ಬದಲಾಯಿಸುತ್ತೇವೆ ಎಂದು ಕಾಶಪ್ಪನ‌ರ್ ಇತ್ತೀಚೆಗೆ ಹೇಳಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ_
https://chat.whatsapp.com/CbYKNyyLfPXA0Br4Dli0d8

Share This Article
Leave a comment

Leave a Reply

Your email address will not be published. Required fields are marked *