ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಬಂಧನ ಬೇಡ: ಕರ್ನಾಟಕ ಹೈಕೋರ್ಟ್‌

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ಬಂಧನದಿಂದ ರಕ್ಷಣೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ವಿಸ್ತರಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ಯಡಿಯೂರಪ್ಪ ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದರು.

ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಲಾಗಿದೆ.


Share This Article
Leave a comment

Leave a Reply

Your email address will not be published. Required fields are marked *