ಶ್ರೀ ಶಿವರಾತ್ರೀಶ್ವರ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಬಸವ ಮೀಡಿಯಾ
ಬಸವ ಮೀಡಿಯಾ

ಮೈಸೂರು:

ಇಲ್ಲಿನ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ವತಿಯಿಂದ ನೀಡಲಾಗುವ ಶ್ರೀ ಶಿವರಾತ್ರೀಶ್ವರ ಪ್ರಶಸ್ತಿಗೆ ಕೃತಿ ಆಹ್ವಾನಿಸಲಾಗಿದೆ.

ವೀರಶೈವ ಲಿಂಗಾಯತ ಧರ್ಮ, ಸಾಹಿತ್ಯ, ಇತಿಹಾಸ, ಕಲೆ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ 2025ನೇ ಸಾಲಿನಲ್ಲಿ ಪ್ರಕಟವಾಗಿರುವ ಕೃತಿ ಪರಿಗಣಿಸಲಾಗುವುದು. 1983ರಿಂದ ಪ್ರತಿ ವರ್ಷ ಒಂದು ಉತ್ತಮ ಕೃತಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಫಲಕ ಹಾಗೂ 25 ಸಾವಿರ ರೂ. ನಗದು ಪುರಸ್ಕಾರವನ್ನು ಒಳಗೊಂಡಿದೆ.

ಲೇಖಕರು ಹಾಗೂ ಪ್ರಕಾಶಕರು ಪ್ರಕಟಿತ ಕೃತಿಗಳನ್ನು ಸಮಿತಿಯ ಅವಗಾಹನೆಗಾಗಿ ನಿರ್ದೇಶಕರು, ಪ್ರಕಟಣ ವಿಭಾಗ, ಜೆಎಸ್ಎಸ್ ಮಹಾವಿದ್ಯಾಪೀಠ, ಜಗದ್ಗುರು ಶಿವರಾತ್ರಿ ರಾಜೇಂದ್ರ ವೃತ್ತ, ಮೈಸೂರು -570004 ಈ ವಿಳಾಸಕ್ಕೆ ಮಾ. 31ರೊಳಗೆ ಕಳುಹಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿ
https://www.facebook.com/basavamedia1/

Share This Article
Leave a comment

Leave a Reply

Your email address will not be published. Required fields are marked *