‘ಪ್ರತಿಭೆ ಗುರ್ತಿಸಿ ಪ್ರೋತ್ಸಾಹಿಸುವ ಹೊಣೆಗಾರಿಕೆ ಸಮಾಜದ್ದು’

ಬಸವನಬಾಗೇವಾಡಿ:

ಪ್ರತಿ ವಿದ್ಯಾರ್ಥಿಗಳಲ್ಲಿ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು ಹೊರ ತಂದು ಪ್ರೋತ್ಸಾಹಿಸುವ ಜವಾಬ್ದಾರಿ ಹೊಣೆಗಾರಿಕೆ ಸಮಾಜದ ಮೇಲಿದೆ ಎಂದು ಖ್ಯಾತ ವಾಗ್ಮಿಗಳು ಹಾಗೂ ತಡೆವಾಡದ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ  ಸಂಗಮೇಶ ಪೂಜಾರಿಯವರು ಹೇಳಿದರು.

ಅವರು ರವಿವಾರ ಸ್ಥಳೀಯ ವಿರಕ್ತಮಠದ ಆವರಣದಲ್ಲಿ ತಾಲೂಕಿನ ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನ ಹಾಗೂ ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಸನ್ಮಾನ ಸಮಾರಂಭ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಸಮಾಜ ನಿರಂತರವಾಗಿ ಮಾಡಬೇಕಾಗಿದೆ ಎಂದು ಹೇಳಿದರು.

ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರನ್ನು ಗೌರವಿಸುವ ಕೆಲಸ ಮಾಡುವ ಪ್ರತಿಷ್ಠಾನಕ್ಕೆ ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ಥಳೀಯ ಪಿಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಈರಣ್ಣ ಪಟ್ಟಣಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿ ಈ ನಿಟ್ಟಿನಲ್ಲಿ ಚನ್ನಬಸವೇಶ್ವರ ಪ್ರತಿಷ್ಠಾನ ಹಾಗೂ ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆ ಉತ್ತಮ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಇಂದಿನ ವಿದ್ಯಾರ್ಥಿಗಳೇ ನಾಡಿನ ಭವಿಷ್ಯವಾಗಿರುವುದರಿಂದ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸುವ ಜವಾಬ್ದಾರಿ, ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷರಾದ ವಿವೇಕಾನಂದ ಕಲ್ಯಾಣಶೆಟ್ಟಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಜವಾಬ್ದಾರಿಯನ್ನು ಸಂಘಟನೆಗಳು ಹೊರಬೇಕಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳನ್ನು ನೈತಿಕವಾಗಿ ಬೆಳೆಸುವ ಜವಾಬ್ದಾರಿಯ ಜೊತೆಗೆ ಆಧ್ಯಾತ್ಮದ ಅಭಿರುಚಿಯನ್ನು ಬೆಳೆಸುವ ಕೆಲಸವನ್ನು ಚನ್ನಬಸವೇಶ್ವರ ಪ್ರತಿಷ್ಠಾನ ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದೆ ಎಂದು ಹೇಳಿದರು. ಸಮಾಜದಲ್ಲಿ ಎಲ್ಲರೂ ಇಂಥಹ ಕಾರ್ಯಗಳಿಗೆ ಕೈಜೋಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಡಾ.ಎನ್. ಬಿ. ವಜೀರಕರ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೀರಣ್ಣ ವರ್ತೂರ, ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕರಾದ ರಾಘವೇಂದ್ರ ಕಟ್ಟಿ ಮಾತನಾಡಿದರು.

ಸಾನಿಧ್ಯವನ್ನು ಸ್ಥಳಿಯ ವಿರಕ್ತಮಠದ ಸಿದ್ದಲಿಂಗ ಸ್ವಾಮಿಗಳು ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕದಳಿ ವೇದಿಕೆಯ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ, ನಿವೃತ್ತ ಶಿಕ್ಷಕರಾದ ನಾಗರಾಜ ಹೊಸಮನಿ, ಸಿ.ಸಿ. ಮೂಕರ್ತಿಹಾಳ ಇತರರು ಇದ್ದರು.

ಪ್ರತಿಷ್ಠಾನದ ಕಾರ್ಯದರ್ಶಿ ಮುತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಠಾಕೂಬಾಯಿ ಲಮಾಣಿ ಸ್ವಾಗತ ಗೀತೆ ಹಾಡಿದರು. ವೀರೇಶ್ ಗೂಡ್ಲಮನಿ ವಂದಿಸಿದರು. ಶಿಕ್ಷಕ ಕೊಟ್ರೇಶ ಹೆಗಡ್ಯಾಳ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಅಖಂಡ ತಾಲೂಕಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಸಂಘಟನೆಗಳ ವತಿಯಿಂದ ಸನ್ಮಾನಿಸಲಾಯಿತು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HyjxiPYAeioCDGVqP9ADsE

Share This Article
Leave a comment

Leave a Reply

Your email address will not be published. Required fields are marked *