ವಿಜಯಪುರ:
‘ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗುತ್ತಿದ್ದವು. ಕೆಪಿಎಸ್‌ಸಿ, ಯುಪಿಎಸ್‌ಸಿ, ವೈದ್ಯಕೀಯ ಹಾಗೂ ಇತರೆಡೆ ಅವಕಾಶ ಸಿಗತ್ತಿದ್ದವು. ಆದರೆ, ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆ ಸಿಗುವುದರಿಂದ ಆಗುವ ಲಾಭದ ಕುರಿತು ಜನರು ಸರಿಯಾಗಿ ಅರ್ಥೈಸಿಕೊಳ್ಳಲಿಲ್ಲ’ ಎಂದು ಸಚಿವ ಎಂ.ಬಿ.ಪಾಟೀಲ ಭಾನುವಾರ ಹೇಳಿದರು.
‘ಲಿಂಗಾಯತ ಸಮಾಜದ ಎಲ್ಲ ಉಪ ಪಂಗಡಗಳಿಗೆ ಒಂದೇ ಸೂರಿನಡಿ ರಾಜ್ಯ ಹಾಗೂ ಕೇಂದ್ರದಲ್ಲಿ ಮೀಸಲಾತಿ ಸಿಗಬೇಕು. ಒಕ್ಕಲಿಗರಿಗೆ ಸಿಕ್ಕ ಮಾದರಿಯಲ್ಲಿ ನಮಗೂ ಸಿಗಬೇಕು’ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
‘ಹಿಂದು ಧರ್ಮ ಬೇರೆ, ಲಿಂಗಾಯತ ಧರ್ಮ ಬೇರೆ’ ಎಂಬ ಸಾಣೆಹಳ್ಳಿ ಶ್ರೀಗಳ ಹೇಳಿಕೆ ಕುರಿತು ಪ್ರತಿಕ್ರಿಏ ನೀಡಲು ನಿರಾಕರಿಸದರು. ‘ಲಿಂಗಾಯತ ಪ್ರತ್ಯೇಕ ಧರ್ಮ ಎಂದು ನಾನು ಈ ಹಿಂದೆ ಮಾತನಾಡಿದಾಗ ಸಾಕಷ್ಟು ಟೀಕೆ ವ್ಯಕ್ತವಾಯಿತು. ಹೀಗಾಗಿ ಈ ಕುರಿತು ಮಾತನಾಡುವುದಿಲ್ಲ,” ಎಂದರು.