ಹುಬ್ಬಳ್ಳಿ
ಗಂಗಾಸ್ನಾನ ಮಾಡಿದರೆ ಪಾಪ ಹೋಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ ಮೇಲೆ ಅವರನ್ನು ಬಿಜೆಪಿ ಹಿಂದೂ ವಿರೋಧಿ ಎಂದು ಖಂಡಿಸಿತ್ತು.
ಶುಕ್ರವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಸಚಿವ ಪ್ರಿಯಾಂಕ ಖರ್ಗೆ ಅವರು ತಮ್ಮ ತಂದೆಯವರ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.
ಗಂಗಾಸ್ನಾನ ಮಾಡಿದರೆ ಪಾಪ ಪರಿಹಾರ ಆಗುತ್ತಾ? ಎಂದು ಪ್ರಶ್ನಿಸಿದರು.
ಬಿಜೆಪಿ ಅವರು ನಮ್ಮನ್ನು ಹಿಂದೂ ವಿರೋಧಿ ಅಂತಾರೆ. ದೇಶದಲ್ಲಿ ಬುದ್ಧಿಸಂ, ಜೈನಿಸಂ, ಸಿಖ್ ಹಾಗೂ ಲಿಂಗಾಯತ ಧರ್ಮಗಳು ಹುಟ್ಟಿವೆ. ಈ ನಾಲ್ಕು ಧರ್ಮಗಳು ಹುಟ್ಟಿದ್ದು ಹಿಂದೂ ಧರ್ಮದ ವಿರುದ್ಧವಾಗಿ. ಯಾವುದರಲ್ಲಿ ಸಮಾನತೆ, ಸ್ವಾಭಿಮಾನ ಇರಲಿಲ್ಲವೊ ಅದರ ವಿರುದ್ಧ ಅವು ಹುಟ್ಟಿವೆ.
ಹಾಗಾದರೆ ಬಸವಣ್ಣನವರು ದೇಶದ್ರೋಹಿನಾ…? ಹಿಂದೂ ವಿರೋಧಿನಾ…? ಬಿಜೆಪಿ ಅವರಿಗೆ ಕಾಮನ್ ಸೆನ್ಸ್ ಇದೆಯಾ…? ಕೇವಲ ಗಂಗಾ ಅಷ್ಟೇ ಅಲ್ಲ ದೇಶದ ಯಾವುದೇ ನದಿಯಲ್ಲಿ ಹೋಗಿ ಡುಮಕಿ ಹಾಕಿದರೂ ಅವರ ಪಾಪ ಪರಿಹಾರ ಆಗುವುದಿಲ್ಲ ಎಂದರು.
ನಮಗೆ ದೇಶದ್ರೋಹಿ ಸರ್ಟಿಫಿಕೇಟ್ ಕೊಡಲು ಬರಬೇಡಿ. ಎಕನಾಮಿಕ್ ಸರ್ವೇ ರಿಪೋರ್ಟ್ ಮುಚ್ಚಿ ಹಾಕುವುದಕ್ಕೆ ಕಾಂಗ್ರೆಸ್ ಹಿಂದೂ ವಿರೋಧಿ ಎಂಬಂತೆ ಹಾಗೂ ಖರ್ಗೆ ಅವರ ಹೇಳಿಕೆಯನ್ನು ಮುನ್ನೆಲೆಗೆ ತರಲಾಗಿದೆ ಎಂದು ಕಿಡಿಕಾರಿದರು.