ಬೆಳಗಾವಿ
ಶತಶತಮಾನಗಳವರೆಗೆ ನಾವು ಬಸವಣ್ಣನವರನ್ನು ರಾಜ್ಯದ ಆಚೆಗೆ ಬಿಟ್ಟುಕೊಡಲಿಲ್ಲ, ಇಂದು ಅವರ ಸಂದೇಶಗಳು ವಿಶ್ವಮಾನ್ಯವೆನಿಸಿವೆ. ಇಂದಿನ ಯುವಜನಾಂಗಕ್ಕೆ ಅದನ್ನು ಮುಟ್ಟಿಸುವ ಕೆಲಸ ಮಾಡಬೇಕಾಗಿದೆ, ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಶಾಹಾಪುರದಲ್ಲಿ ‘ಬಸವ ವಾಹಿನಿ’ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಮಹಾಮಾನವತಾವಾದಿ ಬಸವಣ್ಣನವರ ವಿಚಾರಗಳು ಎಲ್ಲ ಕಾಲಕ್ಕೂ ಮೌಲಿಕವೆನಿಸಿವೆ. ಅವುಗಳು ನಮ್ಮ ಅನುಕರಣೆಯ ಭಾಗವಾಗಬೇಕಾಗಿದೆ. ಫ.ಗು.ಹಳಕಟ್ಟಿಯಂತಹ ಪ್ರಾಥಃಸ್ಮರಣೀಯರಿಂದ ವಚನ ಸಾಹಿತ್ಯ ಬೆಳಕು ಕಂಡಿತು. ಇಲ್ಲದಿದ್ದರೆ ವಚನಗಳನ್ನು ಅಭ್ಯಾಸಿಸಲು ಸಾಧ್ಯವಾಗುತ್ತಿರಲಿಲ್ಲ, ಎಂದು ಹೇಳಿದರು.