ರಂಭಾಪುರಿ ಶ್ರೀ ಹೇಳಿಕೆ‌ ವೈಯಕ್ತಿಕ ಅಭಿಪ್ರಾಯ: ಸಚಿವ ಚೆಲುವರಾಯಸ್ವಾಮಿ

ಬಸವ ಮೀಡಿಯಾ
ಬಸವ ಮೀಡಿಯಾ

ನವದೆಹಲಿ

ಡಿ‌ ಕೆ ಶಿವಕುಮಾರ್ ಸಿಎಂ ಆಗಲಿ‌ ಎಂಬ ರಂಭಾಪುರಿ ಶ್ರೀ ವೀರಸೋಮೇಶ್ವರ ಸ್ವಾಮೀಜಿ ಅವರ ಹೇಳಿಕೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸ್ವಾಮೀಜಿಗಳು ಅರ್ಶಿವಾದ ಮಾಡುವುದಾಗಲಿ ಅಥವಾ ಅಭಿಪ್ರಾಯ ತಿಳಿಸುವುದು ಅದು ಅವರ ವೈಯಕ್ತಿಕವಾಗಿದೆ ಎಂದು ಹೇಳಿದರು.

ದೆಹಲಿಯಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತ ಬಹಳಷ್ಟು ಜನರು ಅಭಿಪ್ರಾಯ ಹೇಳಿದ್ದಾರೆ. ಸ್ವಾಮೀಜಿಗಳು ನಮಗೆ ಗುರುಗಳ ಸ್ಥಾನದಲ್ಲಿ ಇದ್ದಾರೆ. ಅವರ ಅಭಿಪ್ರಾಯ ಅಷ್ಟೇ ಇದು. ನೀವು ಯಾಕೆ ಹೇಳಿದ್ದೀರಿ ಅಂತಾ ನಾವು ಕೇಳಲು ಆಗುತ್ತಾ? ಹೆಚ್ಚು ಚರ್ಚೆ ಅಗತ್ಯ ಇಲ್ಲ ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಒಪ್ಪಂದದಂತೆ ಅಧಿಕಾರ ನೀಡಬೇಕು ಎಂಬ ರಂಭಾಪುರಿ ಶ್ರೀಗಳ ಹೇಳಿಕೆ ವಿಚಾರವಾಗಿ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. “ಜನ, ಶ್ರೀಗಳು ಭಯಸುತ್ತಾರೆ. ಅದನ್ನ ತಪ್ಪು ಎಂದು ಹೇಳಲು ಆಗುವುದಿಲ್ಲ,” ಎಂದರು.

ಈ ಮುಂಚೆ ಕನಕಪುರ ತಾಲೂಕಿನ ಬಿಜ್ಜಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ರಂಭಾಪುರಿ ಶ್ರೀಗಳಿಂದ ಡಿ.ಕೆ.ಶಿವಕುಮಾರ್‌ ಆಶೀರ್ವಾದ ಪಡೆದಿದ್ದರು.

ಆಗ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ನಡೆದ ಒಡಂಬಡಿಕೆಯಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಉನ್ನತ ಸ್ಥಾನದ ಅವಕಾಶ ಕಲ್ಪಿಸಿಕೊಡಬೇಕು ಎಂದು

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ತಂದು ಕೊಟ್ಟಿರುವ ಡಿ.ಕೆ. ಶಿವಕುಮಾರ್‌ ಪಕ್ಷದ ಅಧ್ಯಕ್ಷರಾದ ನಂತರ ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ನಂತರದಲ್ಲಿ ಉನ್ನತ ಸ್ಥಾನ ಲಭಿಸಬೇಕಾಗಿತ್ತು. ಆದರೆ, ಕೇಂದ್ರದ ವರಿಷ್ಠರ ಭಾವನೆಗಳನ್ನು ಮನ್ನಿಸಿ ಡಿಸಿಎಂ ಆಗಿದ್ದಾರೆ. ಮುಂಬರುವ ದಿನಗಳಲ್ಲಿ ಒಡಂಬಡಿಕೆಯಂತೆ ಅವಕಾಶ ಕಲ್ಪಿಸಿಕೊಟ್ಟರೆ ಅವರು ಮಾಡಿದ ತ್ಯಾಗ, ಶ್ರಮಕ್ಕೆ ಸಾರ್ಥಕವಾಗುತ್ತದೆ ಎಂಬ ಭಾವನೆ ನಮ್ಮದು.

ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುವವರೆಗೂ ಪಕ್ಷದ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವಂತೆ ಹೈಕಮಾಂಡ್‌ ನಾಯಕರು ಕೇಳಬಾರದು ಎಂದು ರಂಭಾಪುರಿ ಶ್ರೀ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಕೆಲವರು ಅಧ್ಯಕ್ಷ ಸ್ಥಾನ ತ್ಯಾಗ ಮಾಡಬೇಕು ಎನ್ನುತ್ತಿದ್ದಾರೆ. ಎಲ್ಲಿಯವರೆಗೆ ಡಿಕೆಶಿಗೆ ಸಿಎಂ ಸ್ಥಾನ ಸಿಗಲ್ವೋ, ಅಲ್ಲಿಯವರೆಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವಂತೆ ಹೈಕಮಾಂಡ್‌ ನಾಯಕರು ಹೇಳಬಾರದು. ಹಿಂದೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಆದಂತ ಘಟನೆ ಎಲ್ಲರಿಗೂ ಗೊತ್ತಿದೆ. ಅಂತಹ ಘಟನೆ ಮರುಕಳಿಸಬಾರದು ಎಂದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JREWkVu0WPE5tE1y0tzNQ1

Share This Article
Leave a comment

Leave a Reply

Your email address will not be published. Required fields are marked *