ನಾಳೆಯಿಂದ ರಾಷ್ಟ್ರೀಯ ಬಸವದಳದ ಎರಡು ದಿನಗಳ ಮಹಾ ಅಧಿವೇಶನ

ಕೂಡಲಸಂಗಮ:

ಕೂಡಲಸಂಗಮ ಬಸವ ಧರ್ಮ ಪೀಠದಿಂದ ಜುಲೈ 11 ರಂದು ರಾಷ್ಟ್ರೀಯ ಬಸವ ದಳದ ಮಹಾ ಅಧಿವೇಶನ, 12 ರಂದು ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿಯವರ ಲಿಂಗೈಕ್ಯ ಸಂಸ್ಮರಣೆ ಸಮಾರಂಭ ಹಮ್ಮಿಕೊಂಡಿದೆ ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 11ರ ಬೆಳಗ್ಗೆ 10 ಗಂಟೆಗೆ ರಾಷ್ಟ್ರೀಯ ಬಸವ ದಳದ ಮಹಾ ಅಧಿವೇಶನ ನಡೆಯುವುದು. ಸಾನಿಧ್ಯವನ್ನು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಡಾ. ಗಂಗಾದೇವಿ ವಹಿಸುವರು. ಬಸವ ಧರ್ಮ ಪೀಠದ ಜಂಗಮಮೂರ್ತಿಗಳು, ರಾಷ್ಟ್ರೀಯ ಬಸವ ದಳದ ಪದಾಧಿಕಾರಿಗಳು ಭಾಗವಹಿಸುವರು.

ಜುಲೈ 12 ಬೆಳಗ್ಗೆ 10:30 ಗಂಟೆಗೆ ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿ ಲಿಂಗೈಕ್ಯ ಸಂಸ್ಮರಣೆ ಕಾರ್ಯಕ್ರಮ ನಡೆಯುವುದು. ಸಾನಿಧ್ಯವನ್ನು ಇಲಕಲ್ಲ ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ, ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ತಂಗಡಗಿ ಹಡಪದ ಅಪ್ಪಣ್ಣ ದೇವರ ಮಹಾ ಸಂಸ್ಥಾನಮಠದ ಅಪ್ಪಣ್ಣಭಾರತಿ ಸ್ವಾಮೀಜಿ, ಮನಗೂಳಿ ವಿರಕ್ತ ಮಠದ ವಿರತೀಶಾನಂದ ಸ್ವಾಮೀಜಿ ವಹಿಸುವರು.

ಉದ್ಘಾಟನೆಯನ್ನು ಮಾಜಿ ಸಚಿವ ಎಸ್.ಆರ್. ಪಾಟೀಲ ಮಾಡುವರು ಎಂದು ತಿಳಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/IuAONC0TfmA8PyaqHT9WIP

Share This Article
Leave a comment

Leave a Reply

Your email address will not be published. Required fields are marked *