ಸಾಹಿತ್ಯ ಸಮ್ಮೇಳನದಲ್ಲಿ ವಿಶ್ವ ಗುರು ಬಸವಣ್ಣ, ಸಾಹಿತಿಗಳ ಕಡೆಗಣನೆ ಖಂಡಿಸಿ ಪ್ರತಿಭಟನೆ

ಮಂಜು ಕಲಾಲ
ಮಂಜು ಕಲಾಲ

ಮುದ್ದೇಬಿಹಾಳ

ಸಾಹಿತ್ಯ ಸಮ್ಮೇಳನದಲ್ಲಿ ವಿಶ್ವಗುರು ಬಸವೇಶ್ವರರಿಗೆ ಹಾಗೂ ಸಾಹಿತಿಗಳಿಗೆ ಅಗೌರವ ತೊರಲಾಗಿದೆ ಎಂದು ಆರೋಪಿಸಿ ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿಯೇ ಜೈ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿರುವ ಘಟನೆ ಇವಣಗಿ ಗ್ರಾಮದಲ್ಲಿ ಜರುಗಿದೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ 10ನೇ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ಸರ್ವಾಧ್ಯಕ್ಷರ ಭಾಷಣದ ಸಂದರ್ಭದಲ್ಲಿ ವೇದಿಕೆಯ ಮುಂಭಾಗಕ್ಕೆ ಆಗಮಿಸಿದ ಜೈ ಕರ್ನಾಟಕ ಸಂಘಟನೆ ಕಾರ್ಯಕರ್ತರು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯಲ್ಲಿ ವಿಶ್ವಗುರು ಬಸವೇಶ್ವರರ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳ ಭಾವಚಿತ್ರವನ್ನು ಹಾಕದೇ ಸಾಹಿತಿಗಳಿಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ವಿರೋಧ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಪೋಲಿಸರು ಮದ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.

Share This Article
Leave a comment

Leave a Reply

Your email address will not be published. Required fields are marked *