ಮಹದೇಶ್ವರ ಬೆಟ್ಟ
ಸಾಲೂರು ಬೃಹನ್ಮಠದ 17ನೇ ಪೀಠಾಧಿಪತಿ ಲಿಂಗೈಕ್ಯ ಶ್ರೀ ಪಟ್ಟದ ಗುರುಸ್ವಾಮಿ ಅವರ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಇಂದು ನಡೆಯಲಿದೆ.
ಕಾರ್ಯಕ್ರಮಕ್ಕೆ 150ಕ್ಕೂ ಹೆಚ್ಚು ಮಠಾಧೀಶರು ಹಾಗೂ 25 ಸಾವಿರಕ್ಕೂ ಹೆಚ್ಚು ಭಕ್ತರು ಸೇರಲಿದ್ದಾರೆ. ಇಂದಿನ ಕಾರ್ಯಕ್ರಮಗಳ ಪಟ್ಟಿ:
5 ಗಂಟೆಗೆ
ಪೂಜ್ಯರ ಗದ್ದುಗೆಗೆ ಹಾಗೂ ಮಠದ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಅಷ್ಟೋತ್ತರ ಬಿಲ್ವಾರ್ಚನೆ ಹಾಗೂ ಮಹಾ ಮಂಗಳಾರತಿ ನೆರವೇರಲಿದೆ.
8 ಗಂಟೆಗೆ
ಷಟ್‌ಸ್ಥಳ ಧ್ವಜಾರೋಹಣವನ್ನು ಮಲ್ಲನಮೂಲೆ ಗುರುಕಂಬಳೀಶ್ವರ ಮಠದ ಶ್ರೀ ಚನ್ನಬಸವ ಸ್ವಾಮೀಜಿ ನೆರವೇರಿಸಲಿದ್ದಾರೆ.
10 ಗಂಟೆಗೆ
ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದೆ.
10.30
ಸಭಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀಗಳ ಒಳನೋಟದ ಸಮಗ್ರ ಚಿತ್ರಣವನ್ನು ಬಿಂಬಿಸುವ 400 ಪುಟಗಳ ವಿಶೇಷ ಗ್ರಂಥ ‘ಗುರುಸ್ಮೃತಿ’ಯನ್ನು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಗ್ರಂಥ ಬಿಡುಗಡೆಗೊಳಿಸಲಿದ್ದಾರೆ.
ದೇವನೂರು ಶ್ರೀ ಮಹಾಂತ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ಶ್ರೀವಚನಾನಂದ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,
ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ,
ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಭಾಗವಹಿಸಲಿದ್ದಾರೆ.
ಡಾ. ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾರ್ಗದರ್ಶನದಲ್ಲಿ ಭಕ್ತರು ಚಾಮರಾಜನಗರ ಸೇರಿದಂತೆ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಇತರ ಜಿಲ್ಲೆಗಳಲ್ಲಿ ಕಾರ್ಯಕ್ರಮದ ಪೋಸ್ಟರ್, ಕರಪತ್ರ ಹಂಚಿದ್ದಾರೆ.
ಊಟ, ವಸತಿ, ವೇದಿಕೆ ಕಾರ್ಯಕ್ರಮ ಸಿದ್ದತೆ, ಇತರ ಕಾರ್ಯ ಚಟುವಟಿಕೆಗಳಲ್ಲಿ ಸ್ವಯಂಸೇವಕರು ತೊಡಗಿಸಿ ಕೊಂಡಿದ್ದಾರೆ, ಎಂದು ಆಯೋಜಕರು ತಿಳಿಸಿದ್ದಾರೆ.