ಸಾಮಾಜಿಕ ಜಾಲತಾಣಗಳಲ್ಲಿ ಪಂಚಮಸಾಲಿ ಶ್ರೀ ನಿಂದನೆ, ಪೊಲೀಸರಿಗೆ ದೂರು

ಬಸವ ಮೀಡಿಯಾ
ಬಸವ ಮೀಡಿಯಾ

ಕಾರಟಗಿ

ಪಂಚಮಸಾಲಿ ಸಮಾಜ, ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕಾರು ಖರೀದಿಸಿದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ, ಕೊಲೆಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸುವಂತೆ ಇಲ್ಲಿನ ಪಂಚಮಸಾಲಿ ಸಮಾಜದವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪಟ್ಟಣದಲ್ಲಿ ತಾಲೂಕು ಪಂಚಮಸಾಲಿ ಸಮಾಜದ ಮುಖಂಡರು ಇಲ್ಲಿನ ಪೊಲೀಸ್ ಠಾಣೆಗೆ ತೆರಳಿ ಸ್ವಾಮೀಜಿಗಳ ವಿರುದ್ಧ ‘ಕಾರಟಗಿ ನಾಗರಿಕ ಸಮಾಜ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ 9513956579 ನಂಬರ್‌ನಿಂದ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಕೂಡಲೇ ಈ ವ್ಯಕ್ತಿಯನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸೈಬರ್‌ ಕ್ರೈಮ್ ವಿಭಾಗ ಮತ್ತು ಸ್ಥಳೀಯ ಠಾಣೆಗೆ ಮೂರು ಪ್ರತ್ಯೇಕ ಮನವಿಯನ್ನು ಪಂಚಮಸಾಲಿ ಸಮಾಜದಿಂದ ಸಲ್ಲಿಸಲಾಯಿತು.

Share This Article
Leave a comment

Leave a Reply

Your email address will not be published. Required fields are marked *