ಸಮಾರೋಪ ಸಮಾರಂಭಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಬರಲು ಒಕ್ಕೂಟದ ಕರೆ

ಬಸವ ಮೀಡಿಯಾ
ಬಸವ ಮೀಡಿಯಾ

ಭಾಲ್ಕಿ

ಅಕ್ಟೊಬರ್ 5 ಬೆಂಗಳೂರಿನಲ್ಲಿ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಲಿಂಗಾಯತ ಮಠಾಧೀಪತಿಗಳ ಒಕ್ಕೂಟ ಕರೆ ನೀಡಿದೆ.

ಇಂದು ಹೊರಡಿಸಿರುವ ಪ್ರಕಟಣೆಯಲ್ಲಿ “ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭಕ್ಕೆ ನಾಡು ಹಾಗೂ ಹೊರನಾಡಿನ ಸುಮಾರು ೪೦೦ ಮಠಾಧೀಶರು ಸಾನಿಧ್ಯ ವಹಿಸಲಿದ್ದಾರೆ. ನಮ್ಮ ನಾಡಿನ ಎಲ್ಲ ಬಸವಪರ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ರಾಜ್ಯ ಹೊರರಾಜ್ಯದ ಲಕ್ಷಾಂತರ ಸದ್ಭಭಕ್ತರು ಸೇರುವ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ವಿಶೇಷ ಗೌರವ ಅಭಿನಂದನೆ ಸಲ್ಲಿಸಲು ನಿರ್ಧರಿಸಲಾಗಿದೆ. ರಾಜ್ಯ ಸರಕಾರದ ಸಚಿವ ಸಂಪುಟದ ಎಲ್ಲ ಸಚಿವರು ಪಾಲ್ಗೊಳ್ಳಲಿದ್ದಾರೆ,” ಎಂದು ತಿಳಿಸಿದೆ.

“ವಿಶ್ವಗುರು ಬಸವಣ್ಣನವರು ಕರ್ನಾಟಕದ ‘ಸಾಂಸ್ಕೃತಿಕ ನಾಯಕ’ ಘೋಷಣೆಯ ವರ್ಷಾಚರಣೆಯ ಸಂದರ್ಭದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಈ ಅಭಿಯಾನವು ಸಪ್ಟೆಂಬರ್ ೦೧ ರಂದು ಬಸವಣ್ಣನವರ ಜನ್ಮಭೂಮಿಯಾದ ಬಸವನಬಾಗೇವಾಡಿಯಲ್ಲಿ ಆರಂಭಗೊಂಡು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಂಚರಿಸಿ ವಿದ್ಯಾರ್ಥಿಗಳ ಜೊತೆ ವಚನ ಸಂವಾದ, ಬಸವರಥದ ಮೆರವಣಿಗೆ, ಶರಣರ ಚಿಂತನೆಗಳ ಕುರಿತು ಉಪನ್ಯಾಸಗಳು, ಪರಮಪೂಜ್ಯರ ಅನುಭಾವ ಹಾಗೂ ಆಶೀರ್ವಚನ ಜೊತೆಗೆ ‘ಜಂಗಮದೆಡೆಗೆ’ ನಾಟಕ ಪ್ರದರ್ಶನ ಮುಂತಾದ ರೀತಿಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಾಗಿಬಂದಿದೆ.

ಈ ಅಭಿಯಾನವು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಪೂಜ್ಯ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಗದಗಿನ ಜಗದ್ಗುರು ತೋಂಟದಾರ್ಯ ಮಠದ ಪೂಜ್ಯ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ತರಳಬಾಳು ಶಾಖಾ ಮಠ ಸಾಣೇಹಳ್ಳಿಯ ಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕೂಡಲಸಂಗಮ ಬಸವಧರ್ಮ ಪೀಠದ ಪೂಜ್ಯ ಜಗದ್ಗುರು ಗಂಗಾದೇವಿ ಮಾತಾಜಿ ಹಾಗೂ ನಾಡಿನ ಅನೇಕ ಪೂಜ್ಯರ, ಹರಗುರುಚರಮೂರ್ತಿಗಳ ದಿವ್ಯಸಾನಿಧ್ಯದಲ್ಲಿ ಯಶಸ್ವಿಯಾಗಿ ನಡೆದಿದೆ,” ಎಂದು ಪ್ರಕಟಣೆ ತಿಳಿಸಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/BvguxN7Z0AG9g7Il7l5Lzh

Share This Article
Leave a comment

Leave a Reply

Your email address will not be published. Required fields are marked *