ಸಂಸ್ಕೃತಿ ಚಿಂತಕ ಕೆ.ಎಂ. ವೀರೇಶ ನಿಧನಕ್ಕೆ ಸಂತಾಪ

ಬಸವ ಮೀಡಿಯಾ
ಬಸವ ಮೀಡಿಯಾ

ಚಿತ್ರದುರ್ಗ:

ಶಿಕ್ಷಣ-ಕಲೆ-ಸಾಹಿತ್ಯ ಪ್ರೇಮಿ ಹಾಗೂ ಸಂಸ್ಕೃತಿ ಚಿಂತಕರಾಗಿದ್ದ ನಗರದ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕರೂ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರೂ ಆದ ಡಾ. ಕೆ.ಎಂ. ವೀರೇಶ ನಿಧನಕ್ಕೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ. ಪಿ.ಎಸ್. ಶಂಕರ್, ಎಸ್.ಎನ್. ಚಂದ್ರಶೇಖರ್ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಗು ಸಿಬ್ಬಂದಿ ವರ್ಗದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀಯುತರು ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿಯಾಗಿ ಶಾಲಾ – ಕಾಲೇಜುಗಳ ಅಭಿವೃದ್ಧಿಗೆ ನೀಡಿರುವ ಕೊಡುಗೆ ಸ್ಮರಣೀಯ. ಶ್ರೀಮಠದ ಪರಮಭಕ್ತರಾಗಿದ್ದ ಅವರು ಧಾರ್ಮಿಕ, ಸಾಂಸ್ಕತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಕಾರ್ಯಗಳಲ್ಲಿ ಸದಾ ತೊಡಗಿಸಿಕೊಳ್ಳುತ್ತಿದ್ದರು.

ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನೆರವೇರಿಸಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ವೀರೇಶ ಅವರ ಅಧ್ಯಕ್ಷತೆಯಲ್ಲಿ ಶ್ರೀಮಠದಲ್ಲಿ ರಾಜ್ಯಮಟ್ಟದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು.

ಬಾಪೂಜಿ ವಿದ್ಯಾಸಂಸ್ಥೆಯ ಮೂಲಕ ಶಿಕ್ಷಣ ಪ್ರೇಮಿಯಾಗಿ ನೂರಾರು ಜನರಿಗೆ ಮಾರ್ಗದರ್ಶಕರಾಗಿದ್ದ ಅವರ ಅಗಲಿಕೆಯಿಂದ ಉಂಟಾಗಿರುವ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಅವರ ಕುಟುಂಬ ವರ್ಗದವರಿಗೆ, ಸಂಸ್ಥೆಯ ನೌಕರ ವರ್ಗಕ್ಕೆ, ಹಿತೈಷಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/KwtAu0MkQzPIzsDZf3EOP6

Share This Article
Leave a comment

Leave a Reply

Your email address will not be published. Required fields are marked *