ಸಾಣೇಹಳ್ಳಿಶ್ರೀಗೆ ಶರಣ ವಿಜಯ ಪ್ರಶಸ್ತಿ​

ಬಸವ ಮೀಡಿಯಾ
ಬಸವ ಮೀಡಿಯಾ

ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠ ಹಾಗೂ ಅಂತರರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರದ ಪ್ರಸಕ್ತ ಸಾಲಿನ ಶರಣ ವಿಜಯ ರಾಷ್ಟ್ರೀಯ ಪ್ರಶಸ್ತಿಗೆ ಚಿತ್ರದುರ್ಗದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ.

ದಸರಾ ಹಬ್ಬದ ಅಂಗವಾಗಿ ಶರಣ ಹರಳಯ್ಯನವರ ಗವಿಯಲ್ಲಿ ಅಕ್ಟೋಬರ್ 11ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪಂಡಿತಾರಾಧ್ಯ ಶಿವಾಚಾರ್ಯರು ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಸವತತ್ವ ಪ್ರಚಾರದಲ್ಲಿ ತೊಡಗಿರುವುದನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ ಎಂದು ಹರಳಯ್ಯ ಪೀಠಾಧ್ಯಕ್ಷೆ ಅಕ್ಕ ಗಂಗಾಂಬಿಕಾ ತಿಳಿಸಿದ್ದಾರೆ.

Share This Article
1 Comment

Leave a Reply

Your email address will not be published. Required fields are marked *