ಹುಬ್ಬಳ್ಳಿ:
ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಕಳೆದ ಐದು ವರ್ಷಗಳಿಂದ ಸಾಹಿತ್ಯ ಕ್ಷೇತ್ರದ ವಿವಿಧ ವಿಭಾಗದಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ “ಸಂಗಮ ಸಿರಿ ” ರಾಜ್ಯಮಟ್ಟದ ಪ್ರಶಸ್ತಿ ನೀಡಲಾಗುತ್ತಿದೆ. ಈ ವರ್ಷ ವಚನ ಸಾಹಿತ್ಯ ಸಂಶೋಧನೆ ಕ್ಷೇತ್ರಕ್ಕೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.
ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಫಲಕಗಳನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ. ಬಿ. ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ, ಸಂಯೋಜಕ ಡಾ. ಪ್ರಭು ಗಂಜಿಹಾಳ ತಿಳಿಸಿದ್ದಾರೆ.
ಸಂಶೋಧನಾ ಕೃತಿ ಹಾಗೂ ಸಂಶೋಧಕರ ವಿವರಗಳನ್ನು ಜುಲೈ 15 ರೊಳಗೆ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ, ಮನೆ ನಂ. 338, ಅಕ್ಷಯ ಕಾಲೋನಿ ಎರಡನೇ ಹಂತ, ಗೋಕುಲ ರಸ್ತೆ ಹುಬ್ಬಳ್ಳಿ- 30 ಇಲ್ಲಿಗೆ ಕಳಿಸಬಹುದು. ಮಾಹಿತಿಗೆ ಮೊ. ನಂ. 9060933596, 9986476733 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HyjxiPYAeioCDGVqP9ADsE
