ಗದಗ :
೨೦ರಂದು ಸೋಮವಾರ ಲಿಂಗಾಯತ ಧರ್ಮ ಸಂಸ್ಥಾಪಕ, ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು, ಮಹಾಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ೯೨೧ ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.
ಅಂದು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದಿಂದ ಬೆಳಿಗ್ಗೆ ೮.೩೦ ಗಂಟೆಗೆ ಮೆರವಣಿಗೆ ಹೊರಡಲಿದ್ದು, ಮೆರವಣಿಗೆಯಲ್ಲಿ ಶರಣರ ರೂಪಕಗಳನ್ನೊಳಗೊಂಡ ಸ್ತಬ್ಧಚಿತ್ರಗಳು, ಮಂಗಲವಾದ್ಯ ಮೇಳಗಳು, ಬಸವಾದಿ ಶರಣರ ತತ್ವ ಘೋಷಣೆಗಳು, ಸುಶ್ರಾವ್ಯ ವಚನಗಳ ಪಠಣ ನಡೆಯಲಿದೆ.
ಜೊತೆಗೆ ಮೆರವಣಿಗೆಯಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ, ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ-೨೦೨೬, ಬಸವದಳ, ಬಸವಕೇಂದ್ರ, ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರ, ಅಕ್ಕನ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ದಲಿತ ಸಂಘರ್ಷ ಸಮಿತಿ ಹಾಗೂ ಬಸವಾದಿ ಶರಣರಾದ ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ನೂಲಿಯ ಚಂದಯ್ಯ, ಜೇಡರ ದಾಸಿಮಯ್ಯ, ಮೇದಾರ ಕೇತಯ್ಯ, ಶಿವಯೋಗಿ ಸಿದ್ಧರಾಮೇಶ್ವರ, ಹಡಪದ ಅಪ್ಪಣ್ಣ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ, ಹೂಗಾರ ಮಾದಣ್ಣ, ಕುಂಬಾರ ಗುಂಡಯ್ಯ, ಕಮ್ಮಾರ ಕಲ್ಲಯ್ಯ, ಗಾಣದ ಕಣ್ಣಪ್ಪ ಮುಂತಾದ ಬಸವಣ್ಣನವರ ಸಮಕಾಲೀನ ಶರಣ ಸಂಘಟನೆಗಳ ಸಮಾಜ ಬಾಂಧವರು ಮತ್ತು ನಗರ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ತಮ್ಮ ಸಮಾಜದ ಬಸವಾದಿ ಶರಣರ ಭಾವಚಿತ್ರವನ್ನು ಟ್ಯಾಕ್ಟರ್ ಮತ್ತಿತರ ವಾಹನಗಳಲ್ಲಿ ಅಳವಡಿಸಿಕೊಂಡು, ಶ್ರೀ ಜಗದ್ಗುರು ತೋಂಟದಾರ್ಯ ಮಠಕ್ಕೆ ೨0ರಂದು ಮುಂಜಾನೆ ೮-೩೦ ಗಂಟೆಗೆ ಆಗಮಿಸಿ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀ ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷ ವಿನಾಯಕ ಮಾನ್ವಿ ಮತ್ತು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ ಅವರು ವಿನಂತಿಸಿದ್ದಾರೆ.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/J7ms3D54f67LKI9uBwRD0M
