ಸವದತ್ತಿ;
ತ್ಯಾಗವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಸುಳ್ಳದ ಉಮಾಚಂದ್ರ ಮಂಗಲ ಕಾರ್ಯಾಲಯದಲ್ಲಿ ಅದ್ಧೂರಿಯಾಗಿ ಶನಿವಾರ ನಡೆಯಿತು.
ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮಾತನಾಡುತ್ತ, ತ್ಯಾಗ, ಸೇವೆ, ಶಿಕ್ಷಣ, ನೀರಾವರಿ ಮತ್ತು ಕೃಷಿ ಕ್ಷೇತ್ರಗಳಲ್ಲಿ ಲಿಂಗರಾಜ ದೇಸಾಯಿ ಅವರ ಮಹತ್ವದ ಕೊಡುಗೆಗಳನ್ನು ಸ್ಮರಿಸಿದರು.

ಪೂಜ್ಯ ಹಾನಗಲ್ಲ ಕುಮಾರ ಸ್ವಾಮಿಗಳೊಂದಿಗೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯನ್ನು ಸ್ಥಾಪಿಸುವ ಮೂಲಕ ಸಮಾಜದ ಅಭಿವೃದ್ದಿಗೆ ಅವರ ಮಹತ್ವದ ಪಾತ್ರ ಸೇರಿದಂತೆ ಹಲವಾರು ವಿಷಯಗಳನ್ನು ಸಚಿವರು ಪ್ರಸ್ತಾಪಿಸಿದರು.

ಧಾರವಾಡದ ಮುರುಘಾಮಠದ ಪೂಜ್ಯ ಡಾ. ಮಲ್ಲಿಕಾರ್ಜುನ ಸ್ವಾಮಿಗಳು, ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಪೂಜ್ಯ ಡಾ. ಅಲ್ಲಮಪ್ರಭು ಸ್ವಾಮಿಗಳು, ಸವದತ್ತಿ ಮೂಲಿಮಠದ ಪೂಜ್ಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಿರಸಂಗಿ ಲಿಂಗರಾಜ ದೇಸಾಯಿ ಅವರ ಕುರಿತಾದ ‘ಸಿರಸಂಗಿ ಸಂಸ್ಥಾನ: ಒಂದು ಅಧ್ಯಯನ’ಗ್ರಂಥವನ್ನು ಹಾಗೂ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಸವದತ್ತಿ ಶಾಸಕರುಗಳಾದ ವಿಶ್ವಾಸ್ ವೈದ್ಯ ಅಧ್ಯಕ್ಷತೆ ವಹಿಸಿದ್ದರು. ಬಾಬಾಸಾಹೇಬ ಪಾಟೀಲ, ಎನ್. ಎಚ್. ಕೋನರೆಡ್ಡಿ, ಲಿಂಗಾಯತ ಕುಡುವಕ್ಕಲಿಗ ಸಮಾಜ ಬಾಂಧವರು, ಲಿಂಗರಾಜ ದೇಸಾಯಿ ಅವರ ಅಭಿಮಾನಿ ಬಳಗ ಸೇರಿದಂತೆ ನೂರಾರು ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

