“ಬಸವಣ್ಣನವರ ಬಗ್ಗೆ ಹುಚ್ಚರಂತೆ ಮಾತನಾಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕೆಂದು ಅನೇಕ ಮಠಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.”
ಬೆಂಗಳೂರು
ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಚಿಂತನೆಯನ್ನು ಮೊದಲು ಪ್ರತಿಪಾದಿಸಿದ ಬಸವಣ್ಣನವರು ನಮ್ಮ ಸಂವಿಧಾನದ ಮೂಲ ಶಕ್ತಿ, ಎಂದು ರವಿವಾರ ನಗರದ ಕ್ಲೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಅಂತಹ ಬಸವಣ್ಣನವರ ಬಗ್ಗೆ ಹುಚ್ಚರಂತೆ ಮಾತನಾಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕೆಂದು ಅನೇಕ ಮಠಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ, ಎಂದು ಹೇಳಿದರು.
ಬಸವಣ್ಣನವರಿಗೆ ಯತ್ನಾಳ್ ಒಬ್ಬರೇ ಅಲ್ಲ ಇಡೀ ಬಿಜೆಪಿ ಪಕ್ಷವೇ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ. ಯತ್ನಾಳ್ ಹೇಳಿಕೆಯನ್ನು ಯಡಿಯೂರಪ್ಪ ವಿಜಯೇಂದ್ರ, ಅಶೋಕ್, ಕೇಂದ್ರ ಸಚಿವ ಸೋಮಣ್ಣ ಹಾಗೂ ಬೊಮ್ಮಾಯಿ ಯಾರೂ ಖಂಡಿಸಿಲ್ಲ. ಇದು ಬಿಜೆಪಿ ಬಸವಣ್ಣನವರ ವಿರೋಧಿ ಎಂಬುದನ್ನು ನಿರೂಪಿಸುತ್ತದೆ ಎಂದು ಹೇಳಿದರು.
“ನಮ್ಮ ಪಕ್ಷದ ಸಿದ್ಧಾಂತಕ್ಕೂ ಬಸವಣ್ಣನವರಿಗೂ ಅವಿನಾಭಾವ ಸಂಬಂಧವಿದೆ ಇದನ್ನು ನಾವು ಉಳಿಸಿ, ಬೆಳೆಸಿ, ರಕ್ಷಣೆ ಮಾಡಿಕೊಂಡು ಹೋಗುತ್ತೇವೆ,” ಎಂದು ತಿಳಿಸಿದರು.
ಬಸವಣ್ಣನವರ ಚಿಂತನೆಯೇ ಕಾಂಗ್ರೆಸ್ ಪಕ್ಷದ ಚಿಂತನೆ. ಸಿದ್ದರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಗಳಾದಾಗ ಬಸವಣ್ಣನವರ ಜಯಂತಿಯಂದೇ ಪ್ರಮಾಣ ವಚನ ತೆಗೆದುಕೊಂಡರು. ಎಲ್ಲ ಸರಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯ ಮಾಡಿದ್ದು, ಬಸವಣ್ಣನವರ ಜಯಂತಿಗೆ ಶಕ್ತಿ ಕೊಟ್ಟಿದ್ದು, ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಕಾಂಗ್ರೆಸ್ ಸರಕಾರ. ಯಾವ ಜನತಾದಳ, ಬಿಜೆಪಿ, ಜನಸಂಘವೂ ಈ ಕೆಲಸ ಮಾಡಿಲ್ಲ ಎಂದು ಹೇಳಿದರು.
ತಡವಾಗಿ ಆದರೂ ಕೂಡ ಸರಿಯಾದ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಇವರು ಸಹ ಪೂರ್ತಿಯಾಗಿ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ಪರವಾಗಿ ಇಲ್ಲ ಅನ್ನೋದನ್ನು ನಾವು ಮರೆಯಬಾರದು.
ಸಿದ್ದರಾಮಯ್ಯನವರು ಮನಸ್ಸು ಮಾಡಬೇಕು ಯತ್ನಾಳನ್ನು ಹಾಗೂ ಪೆಜಾವರನನ್ನು ಬಂಧಿಸಲು ಕ್ರಮ ಜರುಗಿಸಬೇಕು