ಬೆಂಗಳೂರು
ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬುಧವಾರ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಯು ಬಿ ವೆಂಕಟೇಶ್ ರವರು ಕಂಠೀರವ ಸ್ಟುಡಿಯೋ ಅಧ್ಯಕ್ಷರಾದ ಪಾಷರವರು ಮಹಾಸಭೆಯ ರಾಷ್ಟ್ರೀಯ ಕಾರ್ಯದರ್ಶಿಗಳಾದ ಎಚ್ಎಂ ರೇಣುಕ ಪ್ರಸನ್ನ ಅವರು ಜೊತೆಗಿದ್ದರು.