ಬೆಂಗಳೂರು
ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರು ಕಳೆದೊಂದು ತಿಂಗಳಿಂದ ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಭಾನುವಾರ ಸಂಜೆ 6.45ಕ್ಕೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿವೆ.
ವೀರಶೈವ ಮಹಾಸಭಾದ ಆಧಾರಸ್ತಂಭವಾಗಿದ್ದ ಶಾಮನೂರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದರು. ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ.
ಜೂನ್ 16, 1930 ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

Shivnu sriyutha shyamanur shivashankeappanavara atmakke chira shanthi needalendu Prarthane
ದೇವರು ಮೃತರ ಆತ್ಮಕ್ಕೆ ಸದ್ಗತಿ ದಯಪಾಲಿಸಲಿ.
🙏🙏
ದೇವರು ಮೃತರ ಆತ್ಮಕ್ಕೆ ಸದ್ಗತಿ ದಯಪಾಲಿಸಲಿ.
RIP🙏🙏