ಗುಂಡ್ಲುಪೇಟೆ
ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸಮುದಾಯದ ಅನುಕೂಲಕ್ಕೆ ಸುಸಜ್ಜಿತ ಬಸವ ಭವನ ನಿರ್ಮಾಣ ಮಾಡಲಾಗುವುದು ಎಂದು ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಸೋಮವಾರ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡುತ್ತ ಅವರು ತಾವು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಸಂಘಟನೆ ಮಾಡುವ ಸಲುವಾಗಿ 33 ಜಿಲ್ಲೆಗಳಲ್ಲಿಯೂ ಪ್ರವಾಸ ನಡೆಸಲಾಗುತ್ತಿದೆ. ಪ್ರತಿ ಗ್ರಾಮಗಳಲ್ಲಿಯೂ ಮಹಾಸಭಾಗೆ ಹೆಚ್ಚಿನ ಸದಸ್ಯತ್ವ ಪಡೆದುಕೊಳ್ಳುವಂತೆ ಮಾಡಿ, ಅಲ್ಲಿ ಸಂಗ್ರಹವಾದ ನಿಧಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದಲ್ಲಿಯೇ ವಿದ್ಯಾರ್ಥಿವೇತನಗಳನ್ನು ಕೊಡಲಾಗುವುದು, ಎಂದರು .
ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರು ಜಿಲ್ಲೆಯಲ್ಲಿ ಬಸವ ಭವನ ನಿರ್ಮಾಣಕ್ಕೆ 3 ಕೋಟಿ ರೂ.ನೆರವು ನೀಡುವುದಾಗಿ ಪ್ರಕಟಿಸಿದರು.
ಮಹಾಸಭಾ ಅಧ್ಯಕ್ಷ ಮೂಡ್ಲುಪುರ ನಂದೀಶ್, ಮಾಜಿ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ತಾಲೂಕು ಅಧ್ಯಕ್ಷ ಕಮರಹಳ್ಳಿ ರವಿ, ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸವಣ್ಣ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಮುಖಂಡರಾದ ಜಿ.ಮಡಿವಾಳಪ್ಪ, ನಾಗೇಂದ್ರ, ಕೆ.ಎಸ್.ಮಹೇಶ್, ಡಿ.ಪಿ.ಜಗದೀಶ್, ಎಸ್.ಎಂ.ಮಲ್ಲಿಕಾರ್ಜುನ, ಆರ್.ಎಸ್.ನಾಗರಾಜು, ಶಿವಮೂರ್ತಿ, ಮಹೇಶ್ ಇದ್ದರು.