ಅಣ್ಣಿಗೇರಿ
ರೋಣ ತಾಲ್ಲೂಕಿನ ಕೊತಬಾಳ ಗ್ರಾಮದ ಖ್ಯಾತ ಜಾನಪದ ಕಲಾವಿದ ಶಂಕ್ರಣ್ಣ ಸಂಕಣ್ಣವರ ಅವರು 5ನೇ ಸಾಲಿನ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮರಣಾರ್ಥ ಕೊಡಮಾಡುವ ಈ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 18-02-2025 ರಂದು ಪಟ್ಟಣದ ಶ್ರೀಮತಿ ನಿಂಗಮ್ಮ ಎಸ್. ಹೂಗಾರ ಕಾಲೇಜು ಆವರಣದಲ್ಲಿ ಸಂಜೆ 6-00 ಗಂಟೆಗೆ ನಡೆಯಲಿದೆ.
ಸಮಾರಂಭದ ಸನ್ನಿಧಾನವನ್ನು ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಡಂಬಳ – ಗದಗ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನವಲಗುಂದ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎನ್. ಎಚ್. ಕೋನರಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಇದುವರೆಗೆ ಪ್ರಶಸ್ತಿ ಪುರಸ್ಕೃತರು :
ಡಾ.ವೀರಣ್ಣ ರಾಜೂರ – 2020
ಡಾ.ಎಚ್.ಎಸ್.ಅನಪಮಾ – 2021
ಡಾ. ಅಬ್ದುಲ್ ಖಾದರ ನಡಕಟ್ಟಿನ – 2022
ಶ್ರೀ ಸುರೇಶ ಹೆಬ್ಳೀಕರ – 2023
ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಲು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ರಾಜ್ಯ ಪ್ರಶಸ್ತಿ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.
