ಶರಣ ಸಂಸ್ಥಾನದ 8ನೇ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪ ಲಿಂಗೈಕ್ಯ

ಬಸವ ಮೀಡಿಯಾ
ಬಸವ ಮೀಡಿಯಾ

ಕಲಬುರಗಿ

ಕಲ್ಯಾಣ ನಾಡಿನ ಪ್ರಸಿದ್ಧ ಮಹಾದಾಸೋಹಿ, ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ.ಶರಣಬಸವಪ್ಪ ಅಪ್ಪ (90) ಅವರು ಗುರುವಾರ ಸಂಜೆ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಸಂಜೆ ಆಸ್ಪತ್ರೆಯಿಂದ ಅಪ್ಪ ಅವರ ನಿವಾಸ ‘ಮಹಾಮನೆ’ಗೆ ಕರೆದೊಯ್ದ ಕೆಲ ಹೊತ್ತಿನಲ್ಲಿ ಕೊನೆಯುಸಿರೆಳೆದರು.

ಡಾ.ಶರಣಬಸವಪ್ಪ ಅಪ್ಪ ಅವರ ಅಂತಿಮ ವಿಧಿ ವಿಧಾನವು ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅವರಿಗೆ ಪತ್ನಿ ದಾಕ್ಷಾಯಣಿ ಎಸ್. ಅಪ್ಪ, ಏಳು ಜನ ಪುತ್ರಿಯರು, ಪುತ್ರ, ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಇದ್ದಾರೆ.

ಕಲಬುರಗಿಯ ಶ್ರೀ ಶರಣಬಸವೇಶ್ವರ ಸಂಸ್ಥಾನವು ಅನಾದಿಕಾಲದಿಂದಲೂ ದಾಸೋಹ ಪರಂಪರೆಯನ್ನು ಮುಂದುವರಿಸಿಕೊಂಡು ಬರುತ್ತಿದೆ. ಡಾ.ಶರಣಬಸವಪ್ಪ ಅಪ್ಪ ಅವರು ದಾಸೋಹದ ಜತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯೂ ಮಾಡಿದ ಖ್ಯಾತಿಯನ್ನು ಪಡೆದಿದ್ದಾರೆ. ವಿದ್ಯಾಭಂಡಾರಿ ಸೇರಿದಂತೆ ಹಲವು ಬಿರುದುಗಳನ್ನು ಅವರು ಪಡೆದುಕೊಂಡಿದ್ದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ತತ್ವಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಡಾ.ಶರಣಬಸವಪ್ಪ ಅಪ್ಪ ಅವರು ನಂತರ ಅದೇ ವಿ.ವಿ.ಯ ಸಿಂಡಿಕೇಟ್ ಸದಸ್ಯರಾಗಿದ್ದರು.

ಗುಲಬರ್ಗಾದಲ್ಲಿ ಸ್ವತಂತ್ರ ವಿಶ್ವವಿದ್ಯಾಲಯ ಮಂಜೂರಾತಿಗೆ ಶ್ರಮಿಸಿದ್ದ ಅಪ್ಪ ಅವರು ವಿ.ವಿ. ಆರಂಭಕ್ಕೆ ಅಗತ್ಯವಾದ ಭೂಮಿ ಹಾಗೂ ಇತರ ಸೌಕರ್ಯಗಳನ್ನು ಗುರುತಿಸಲು ಸರ್ಕಾರ ನೇಮಕ ಮಾಡಿದ್ದ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ ಶೈಕ್ಷಣಿಕ ಕ್ರಾಂತಿ ಮಾಡಿದ್ದ ಶರಣಬಸವಪ್ಪ ಅವರು ಶರಣಬಸವೇಶ್ವರ ವಿಶ್ವವಿದ್ಯಾಲಯ, ಶರಣಬಸವೇಶ್ವರ ರೆಸಿಡೆನ್ಷಿಯಲ್ ಪಬ್ಲಿಕ್ ಸ್ಕೂಲ್, ಅಪ್ಪ ಪಬ್ಲಿಕ್ ಸ್ಕೂಲ್‌, ಗೋದುತಾಯಿ ಮಹಿಳಾ ಕಾಲೇಜು, ಎಂಜಿನಿಯರಿಂಗ್, ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜುಗಳನ್ನು ಆರಂಭಿಸಿ ಹೊಸ ಎತ್ತರಕ್ಕೆ ಕೊಂಡೊಯ್ದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸೊಸೈಟಿಯ ಅಧ್ಯಕ್ಷರಾಗಿಯೂ ಶರಣಬಸವಪ್ಪ ಅವರು ಕಾರ್ಯನಿರ್ವಹಿಸಿದ್ದರು.

ಅಕ್ಷರ ಕ್ರಾಂತಿಕಾರಿ ಡಾ. ಶರಣಬಸಪ್ಪ ಅಪ್ಪ

60ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಪ್ರಾರಂಭಿಸಿದ್ದ ಅವರು, 1973 ರಿಂದ 2017 ರವರೆಗೆ ಬರೋಬ್ಬರಿ 60 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಪ್ರಾರಂಭ ಮಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಮಾಡಿದರು. IAS ಮತ್ತು IPS ತರಬೇತಿ ಕೇಂದ್ರ ಸ್ಥಾಪನೆ ಮಾಡಿದರು.

ಜೊತೆಗೆ ಮಹಿಳೆಯರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು. 1935 ರಲ್ಲಿ ಮಹಾದೇವಿ ಕನ್ಯಾಪ್ರೌಢಶಾಲೆ ಸ್ಥಾಪನೆ ಮಾಡಿದರು. ಮಹಿಳೆಯರಿಗಾಗಿ ಪ್ರತ್ಯೇಕ ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿದ್ದರು. 2017ರಲ್ಲಿ ಶರಣಬಸವ ವಿಶ್ವವಿದ್ಯಾಲಯ ಪ್ರಾರಂಭ ಮಾಡಿದರು.

ಪುತ್ರ, 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಅವರೊಂದಿಗೆ

ಡಾ.ಶರಣಬಸವಪ್ಪ ಅಪ್ಪಾಗೆ 7ಕ್ಕೂ ಹೆಚ್ಚು ಪ್ರಶಸ್ತಿಗಳು

  • 1988 ರಲ್ಲಿ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ
  • 1992 ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ‌
  • ಕರ್ನಾಟಕ ಸರ್ಕಾರದ ಲಲೀತಕಲಾ ಅಕಾಡೆಮಿ ಇಂದ ಕಲಾಪೋಷಕ ಪ್ರಶಸ್ತಿ
  • HKE ಶಿಕ್ಷಣ ಸಂಸ್ಥೆಯಿಂದ ವಿದ್ಯಾಭಂಡಾರಿ ಬಿರುದು

26 ಎಕರೆ ಜಮೀನಿನಲ್ಲಿ ಗೋ ಶಾಲೆ ನಿರ್ಮಾಣ ಮಾಡಿದ್ದಾರೆ. 2019ರಲ್ಲಿ ಪ್ರವಾಹ ಸಂದರ್ಣದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಹಣವನ್ನು ದಾನ ಮಾಡಿದ್ದರು.

2003 ರಲ್ಲಿ ದೆಹಲಿಯ ಪಾರ್ಲಿಮೆಂಟ್ ಅವರಣದ 9ನೇ ಗೇಟ್ ಬಳಿ ಬಸವಣ್ಣನವರ ಕಂಚಿನ ಪ್ರತಿಮೆ ಸ್ಥಾಪನೆ ಮಾಡಿಸಿದ್ದ ಕೀರ್ತಿ ಇವರಿಗೆ ಸಲ್ಲುತ್ತದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/LCPORn7EbNfEBlG1MCXUuM

Share This Article
4 Comments
  • ಕಾಯಕವೇ ಕೈಲಾಸ ಎಂದು ಬಸವಣ್ಣನವರು ಹೇಳಿದಂತೆ ಕಾಯಕವನ್ನು ನಿಷ್ಠೆಯಿಂದ ತಮ್ಮ ಜೀವನ ಶೈಲಿಯಲ್ಲಿ ಅಳವಡಿಸಿ ಸೇವೆ ಸಲ್ಲಿಸಿದ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಆ ದೇವನಲ್ಲಿ ಪ್ರಾರ್ಥನೆ. ಹಾಗೂ ಅವರ ಪರಿವಾರದ ಸದಸ್ಯರ ದುಃಖದಲ್ಲಿ ಭಾಗಿಯಾಗೋಣ.

  • Pujya Sharanabasappa appaji has revolutionized the education of Hyderabad Karnataka region. Pujya appaji established innumerable institutiiinstitutions for all. Under Pujya appaji’s forsighted guidance Sharanabasaveswara University is established. Sharanabasaveswara Samsthana has become the Beacon of education in the field of Art Science Engineering etc.

    Woman’s Education was initiated by pujya appaji. The Legend of Education has merged into cosmos.
    Pray the Soul Rest in eternal peace.
    🙏🙏🙏🙏🙏🙏🙏🙏🙏🙏

  • ಲಿಂಗೖಕ್ಯ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪ ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತ ಅವರ ನಂತರವೂ ಶ್ರೀ ಸಂಸ್ಥಾನ ಅದೇ ಮಟ್ಟದಲ್ಲಿ ಬೆಳೆಯುವಂತಾಗಲಿ ಎಂದು ಆಶಿಸುವೆ. ಬಸವಾದಿ ಶರಣರು ಕೊಡಮಾಡಿದ ಕಾಯಕ ದಾಸೋಹ ಶ್ರೀ ಶರಣಬಸವೇಶ್ವರ ಸಂಸ್ಥಾನದಿಂದ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಮಜಮುಖಿಯಾಗಲಿ. ಶರಣು, ಶರಣಾರ್ಥಿಗಳು 🙏🙏

Leave a Reply

Your email address will not be published. Required fields are marked *